ನವದೆಹಲಿ: ಐಸಿಸಿ U19 ವಿಶ್ವಕಪ್ 2022 ಗೆದ್ದ ಟೀಮ್ ಇಂಡಿಯಾವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತೀಯ ಕ್ರಿಕೆಟ್ ಭವಿಷ್ಯವು ಸುರಕ್ಷಿತ ಮತ್ತು ಸಮರ್ಥ ಕೈಯಲ್ಲಿದೆ ಎಂಬುದನ್ನು ಇದು ಪ್ರದರ್ಶನ ತೋರಿಸುತ್ತದೆ ಎಂದು ಹೇಳಿದ್ದಾರೆ.
“ನಮ್ಮ ಯುವ ಕ್ರಿಕೆಟಿಗರ ಬಗ್ಗೆ ಅತ್ಯಂತ ಹೆಮ್ಮೆಯಿದೆ. ICC U19 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ಟೂರ್ನಿಯ ಮೂಲಕ ಅಮೋಘ ಸಾಮರ್ಥ್ಯ ತೋರಿದ್ದಾರೆ. ಅವರ ಅತ್ಯುನ್ನತ ಮಟ್ಟದಲ್ಲಿ ಅವರ ಅದ್ಭುತ ಪ್ರದರ್ಶನವು ಭಾರತೀಯ ಕ್ರಿಕೆಟ್ ಭವಿಷ್ಯವು ಸುರಕ್ಷಿತ ಮತ್ತು ಸಮರ್ಥ ಕೈಯಲ್ಲಿದೆ ಎಂದು ತೋರಿಸುತ್ತದೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಶನಿವಾರ ಸರ್ ವಿವಿಯನ್ ರಿಚರ್ಡ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಹಣಾಹಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಭಾರತವು ಐದನೇ ಅಂಡರ್ 19 ವಿಶ್ವಕಪ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ. ಯಶ್ ಧುಲ್ ನೇತೃತ್ವದ ತಂಡವು ತ್ರೀ ಲಯನ್ಸ್ ತಂಡವನ್ನು ನಾಲ್ಕು ವಿಕೆಟ್ಗಳಿಂದ ಸೋಲಿಸಿತು.
Extremely proud of our young cricketers. Congratulations to the Indian team for winning the ICC U19 World Cup. They have shown great fortitude through the tournament. Their stellar performance at the highest level shows that the future of Indian cricket is in safe and able hands.
— Narendra Modi (@narendramodi) February 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.