ನವದೆಹಲಿ: ಖನಿಜಗಳ ಹರಾಜು ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ರಚಿಸಲಾದ ಗಣಿ ಮತ್ತು ಖನಿಜ(ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ 2015 ಶುಕ್ರವಾರ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ.
ಅಲ್ಲದೇ ಈ ಮಸೂದೆಯನ್ನು ಆಯ್ಕೆ ಸಮಿತಿಗೆ ಮತ್ತೊಮ್ಮೆ ಕೊಂಡೊಯ್ಯುವ ಬಗೆಗಿನ ನಿರ್ಣಯವನ್ನು ರಾಜ್ಯಸಭೆ ತಿರಸ್ಕರಿಸಿತು.
ತೃಣಮೂಲ ಕಾಂಗ್ರೆಸ್, ಎಐಎಡಿಎಂಕೆ, ಬಹುಜನ ಸಮಾಜವಾದಿ ಪಕ್ಷ, ಸಮಾಜವಾದಿ ಪಕ್ಷ, ಬಿಜೆಡಿ ಮಸೂದೆಯ ಪರವಾಗಿ ಮತ ಚಲಾಯಿಸಿದವು. ಕೇವಲ ಕಾಂಗ್ರೆಸ್ ಮತ್ತು ಎಡಪಕ್ಷಗಳು ಮಸೂದೆಯನ್ನು ವಿರೋಧಿಸಿದವು.
ಮಸೂದೆಯನ್ನು ಆಯ್ಕೆ ಸಮಿತಿಗೆ ಕಳುಹಿಸಬೇಕೆಂದು ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದರು. ಆದರೆ ಇದಕ್ಕೆ ಮೇಲ್ಮನೆಯಲ್ಲಿ ಮಾನ್ಯತೆ ಸಿಗಲಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.