ನವದೆಹಲಿ: ವ್ಯಾಪಾರ ಮತ್ತು ಸಂಪರ್ಕ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಶ್ರೀಲಂಕಾದ ವಿದೇಶಾಂಗ ಸಚಿವ ಜಿ.ಎಲ್.ಪೀರಿಸ್ ಅವರು ಮೂರು ದಿನಗಳ ಭಾರತ ಭೇಟಿಗಾಗಿ ಭಾನುವಾರ ದೆಹಲಿಗೆ ಆಗಮಿಸಿದರು.
ಭಾರತದಲ್ಲಿನ ಶ್ರೀಲಂಕಾದ ಹೈಕಮಿಷನರ್ ಮಿಲಿಂದ ಮೊರಗೋಡ ಅವರು ದೆಹಲಿಯಲ್ಲಿ ಅವರನ್ನು ಬರಮಾಡಿಕೊಂಡರು.
ಶ್ರೀಲಂಕಾದ ವಿದೇಶಾಂಗ ಸಚಿವ ಪ್ರೊ.ಜಿ.ಎಲ್. ಪೀರಿಸ್ ಅವರು ಅಧಿಕೃತ ಭೇಟಿಗಾಗಿ ದೆಹಲಿಗೆ ಆಗಮಿಸಿದ್ದಾರೆ” ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.
ಅವರು ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಲಿದ್ದಾರೆ.
ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಅವರನ್ನು ಸೋಮವಾರ ಪೀರಿಸ್ ಭೇಟಿಯಾಗಿ ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಮಾರ್ಗಗಳನ್ನು ಪರಿಶೀಲಿಸುವ ನಿರೀಕ್ಷೆಯಿದೆ.
ಭಾರತೀಯ ಮಾಧ್ಯಮಗಳ ಪ್ರಕಾರ ವಿವಾದಿತ ಮೀನುಗಾರರ ಸಮಸ್ಯೆಯೂ ಮಾತುಕತೆಯಲ್ಲಿ ಪ್ರಸ್ತಾಪವಾಘುವ ಸಾಧ್ಯತೆಯಿದೆ.
ಜೈಶಂಕರ್ ಅವರು ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ನ್ಯೂಯಾರ್ಕ್ನಲ್ಲಿ ಪೀರಿಸ್ ಅವರನ್ನು ಭೇಟಿಯಾಗಿ ಉಭಯ ದೇಶಗಳ ನಡುವಿನ ನಿಕಟ ಪಾಲುದಾರಿಕೆ ಕುರಿತು ಸಮಗ್ರ ಚರ್ಚೆ ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.