ನವದೆಹಲಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡುವ ಜಿಎಸ್ ಟಿ ಪರಿಹಾರವನ್ನು 2024-25ರ ವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
ಎರಡು ದಿನಗಳ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು ಇಂದು ಹಣಕಾಸು ಸಚಿವರನ್ನು ಭೇಟಿಯಾಗಿ, 2022ರ ಮಾರ್ಚ್ ಗೆ ಜಿ.ಎಸ್.ಟಿ. ಪರಿಹಾರದ ಅವಧಿ ಮುಕ್ತಾಯಗೊಳ್ಳಲಿದೆ. ಆದರೆ ಕೋವಿಡ್ 19 ರಿಂದಾಗಿ ರಾಜ್ಯ ಸರ್ಕಾರಗಳು ಸಂಪನ್ಮೂಲ ಕ್ರೋಢೀಕರಿಸಲು ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಜಿ.ಎಸ್.ಟಿ. ಪರಿಹಾರದ ಅವಧಿ ವಿಸ್ತರಿಸುವ ಮೂಲಕ ರಾಜ್ಯ ಸರ್ಕಾರಗಳ ಸಂಕಷ್ಟ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ಸಾಲದ ಮೂಲಕ ರಾಜ್ಯಗಳಿಗೆ ಜಿ.ಎಸ್.ಟಿ. ಪರಿಹಾರ ಒದಗಿಸಿದಂತೆ, ಮುಂದಿನ ಮೂರು ವರ್ಷಗಳೂ ಇದೇ ಕ್ರಮ ಅನುಸರಿಸುವಂತೆ ಹಾಗೂ ಜಿ.ಎಸ್.ಟಿ. ಸೆಸ್ ಸಂಗ್ರಹದಿಂದ ಈ ಸಾಲ ಮರುಪಾವತಿ ಮಾಡಬಹುದು ಎಂದು ಮುಖ್ಯಮಂತ್ರಿಗಳು ಪ್ರಸ್ತಾಪಿಸಿದ್ದಾರೆ.
Glad to have met our Union Finance Minister Smt @nsitharaman Ji in New Delhi today.
Various issues relating to the state's welfare were discussed and deliberated upon. pic.twitter.com/Rb24YO4w68
— Basavaraj S Bommai (@BSBommai) February 7, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.