ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.
ಕಳೆದ ಆರು ತಿಂಗಳ ಅವಧಿಯಲ್ಲಿ ತಮ್ಮ ನೇತೃತ್ವದ ಸರ್ಕಾರ ಮಾಡಿರುವ ಸಾಧನೆಯ ಕಿರುಹೊತ್ತಿಗೆಯನ್ನು ನೀಡಿ ಅದರ ಸಾರಾಂಶವನ್ನು ಅಮಿತ್ ಷಾ ಅವರಿಗೆ ವಿವರಣೆ ನೀಡಿದರು. ತಮ್ಮ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳಿಂದ ಜನಸಾಮಾನ್ಯರು ಹಾಗೂ ಬಡವರಿಗೆ ಆಗುವ ಲಾಭಗಳ ಕುರಿತು ಐಸಾಕ್ ನಡೆಸಿರುವ ಅಧ್ಯಯನ ವರದಿಯನ್ನು ಇದೇ ಸಂದರ್ಭದಲ್ಲಿ ನೀಡಿದರು.
ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಅಮಿತ್ ಶಾ ಅವರು ಪ್ರಶಂಸೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿನ ಸ್ಥಿತಿಗತಿ ಕುರಿತು ಅಮಿತ್ ಶಾ ಅವರ ಜೊತೆ ಬೊಮ್ಮಾಯಿ ಚರ್ಚೆ ನಡೆಸಿದರು.
I thank our Union Home Minister @AmitShah ji for taking the time to meet and discuss various issues at New Delhi today.
Glad to have presented a compilation of the achievements of our Govt in the last 6 months.1/2 pic.twitter.com/wdJS2AQ621
— Basavaraj S Bommai (@BSBommai) February 7, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.