ನವದೆಹಲಿ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಬಿಡುಗಡೆ ಮಾಡಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಯುಪಿ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರ ಸಮ್ಮುಖದಲ್ಲಿ ‘ಲೋಕ ಕಲ್ಯಾಣ ಸಂಕಲ್ಪ ಪತ್ರ’ ಬಿಡುಗಡೆ ಮಾಡಲಾಯಿತು.
92 ನೇ ವಯಸ್ಸಿನಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಭಾನುವಾರ ನಿಧನರಾದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಗೌರವ ಸೂಚಕವಾಗಿ ಬಿಜೆಪಿಯ ಪ್ರಣಾಳಿಕೆ ‘ಲೋಕ ಕಲ್ಯಾಣ ಸಂಕಲ್ಪ ಪತ್ರ’ ಬಿಡುಗಡೆಯನ್ನು ಇಂದಿಗೆ ಮುಂದೂಡಲಾಗಿತ್ತು.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27, ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
ಈ ಹಿಂದೆ 2017 ರ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷವು 312 ವಿಧಾನಸಭಾ ಸ್ಥಾನಗಳನ್ನು ಗೆದ್ದು ಪ್ರಚಂಡ ಗೆಲುವು ಸಾಧಿಸಿತ್ತು. 403 ಸದಸ್ಯ ಬಲದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಶೇ 39.67ರಷ್ಟು ಮತಗಳನ್ನು ಗಳಿಸಿತ್ತು. ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ (ಎಸ್ಪಿ) 47 ಸ್ಥಾನಗಳನ್ನು ಪಡೆದಿದ್ದರೆ, ಮಾಯಾವತಿ ಅವರ ಬಹುಜನ ಸಮಾಜ ಪಕ್ಷ (ಬಿಎಸ್ಪಿ) 19 ಸ್ಥಾನಗಳನ್ನು ಗೆದ್ದುಕೊಂಡಿತ್ತು ಮತ್ತು ಕಾಂಗ್ರೆಸ್ಗೆ ಕೇವಲ 7 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.
HM Shri @AmitShah releases Lok Kalyan Sankalp Patra in Lucknow, Uttar Pradesh. #भाजपा_का_संकल्प pic.twitter.com/9aC2PQW0pR
— BJP (@BJP4India) February 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.