ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಅನಂತನಾಗ್ ಜಿಲ್ಲೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಎಂ) ನ ಎರಡು ಭಯೋತ್ಪಾದಕ ಘಟಕಗಳನ್ನು ಭೇದಿಸಿದ್ದಾರೆ ಮತ್ತು ಮೂವರು ಸಕ್ರಿಯ ಭಯೋತ್ಪಾದಕರು ಸೇರಿದಂತೆ 11 ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದಾರೆ.
ಅವರ ವಶದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
“ಅನಂತ್ನಾಗ್ನ ಶ್ರೀಗುಫ್ವಾರಾ ಬಿಜ್ಬೆಹರಾ ಪ್ರದೇಶಗಳಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಪೊಲೀಸ್ ಮತ್ತು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದೆ ಎಂಬ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ವಿವಿಧ ಸ್ಥಳಗಳಲ್ಲಿ ಅನೇಕ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶ್ರೀಗುಫ್ವಾರಾ ಗ್ರಾಮದ ಸಖ್ರಾಸ್ ಕ್ರಾಸಿಂಗ್ನಲ್ಲಿ ಅಂತಹ ಚೆಕ್ಪೋಸ್ಟ್ಗಳಲ್ಲಿ ಒಂದನ್ನು ಪರಿಶೀಲಿಸುತ್ತಿದ್ದ ಸಂದರ್ಭದಲ್ಲಿ ಬೈಕ್ನಲ್ಲಿ ಬಂದ ಮೂವರು ವ್ಯಕ್ತಿಗಳು ಪರಾರಿಯಾಗಲು ಪ್ರಯತ್ನಿಸಿದಾಗ ಅವರನ್ನು ತಡೆದು ಬಂಧಿಸಲಾಗಿದೆ.
ಅವರನ್ನು ವಿಚಾರಿಸಿದಾಗ ಎರಡು ಪಿಸ್ತೂಲ್ (ಚೈನೀಸ್) ಜೊತೆಗೆ ಮ್ಯಾಗಜೀನ್ ಮತ್ತು ಮದ್ದುಗುಂಡುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೈಶ್ ಎ ಮೊಹಮ್ಮದ್ನ ಈ ಸಹಚರರು ಪಾಕಿಸ್ಥಾನಿ ಮೂಲದ ಹ್ಯಾಂಡ್ಲರ್ಗಳೊಂದಿಗೆ ನೇರ ಸಂಪರ್ಕದಲ್ಲಿದ್ದಾರೆ ಮತ್ತು ಅವರ ಆದೇಶದ ಮೇರೆಗೆ ಅವರು ಶ್ರೀಗುಫ್ವಾರಾ ಪ್ರದೇಶದಲ್ಲಿ ಪೊಲೀಸ್ ಭದ್ರತಾ ಪಡೆಗಳ ಮೇಲೆ ದಾಳಿ ಮಾಡಲು ಯೋಜಿಸಿದ್ದಾರೆ ಎಂಬುದು ತಿಳಿದು ಬಂದಿದೆ ಎಂದು ಮೂಲಗಳು ತಿಳಿಸಿವೆ.
ಬಂಧಿತರನ್ನು ಫಯಾಜ್ ಅಹ್ ಖಾನ್, ಮುಂತಜೀರ್ ರಶೀದ್ ಮಿರ್, ಮೊಹಮ್ಮದ್ ಆರಿಫ್ ಖಾನ್, ಆದಿಲ್ ಅಹ್ ತಾರ್ರೆ, ಜಾಹಿದ್ ಅಹ್ಮದ್ ನಜರ್ ಎಂದು ಗುರುತಿಸಲಾಗಿದೆ ಮತ್ತು ಆರನೇಯವನು ಬಾಲಾಪರಾಧಿ. ಉಳಿದವರ ಗುರುತು ಪತ್ತೆ ನಡೆಯುತ್ತಿದೆ. ಪೊಲೀಸರು ಇವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.