ನವದೆಹಲಿ: ಭಾರತದೊಳಗೆ ಮಾದಕ ವಸ್ತುಗಳನ್ನು ಕಳ್ಳ ಸಾಗಣೆ ಮಾಡುವ ಪಾಕಿಸ್ಥಾನದ ಮತ್ತೊಂದು ಪ್ರಯತ್ನ ವಿಫಲವಾಗಿದೆ. ಪಂಜಾಬಿನ ಅಂತರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆ ಬಿಎಸ್ಎಫ್ ಪಾಕಿಸ್ಥಾನದ ಡ್ರೋಣ್ವೊಂದನ್ನು ಹೊಡೆದುರುಳಿಸಿದ್ದು ಅದರಲ್ಲಿದ್ದ ಮಾದಕ ದ್ರವ್ಯ ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ.
ಗುರುದಾಸ್ಪುರ ಸೆಕ್ಟರ್ನ ಪಂಜ್ಗ್ರೇನ್ ಪ್ರದೇಶದಲ್ಲಿ ಮಧ್ಯರಾತ್ರಿ ಸಂಶಯಾಸ್ಪದ ರೀತಿಯಲ್ಲಿ ಇದ್ದ ವಸ್ತುವನ್ನು ಪತ್ತೆಹಚ್ಚಿದ ಬಿಎಸ್ಎಫ್ ಗುಂಡಿನ ದಾಳಿಯನ್ನು ನಡೆಸಿ ಡ್ರೋಣ್ ಅನ್ನು ಹೊಡೆದುರುಳಿಸಿತ್ತು .
ಬಳಿಕ ನಡೆಸಲಾದ ಶೋಧ ಕಾರ್ಯಾಚರಣೆಯಲ್ಲಿ ಗಗ್ಗರ್ ಹಾಗೂ ಸಿಂಘೋಕೆ ಪ್ರದೇಶದಲ್ಲಿ ಹಳದಿ ಬಣ್ಣದ ಎರಡು ಪ್ಯಾಕೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನು ಡ್ರೋನ್ ಮೂಲಕ ಎಸೆಯಲಾಗಿದೆ ಎಂದು ಶಂಕಿಸಲಾಗಿದೆ. ಪ್ಯಾಕೆಟ್ನಲ್ಲಿ ಪಿಸ್ತೂಲ್ ಕೂಡ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
#UPDATE | Babu, the youth trapped in a steep gorge in Malampuzha mountains in Palakkad, Kerala has now been rescued. Teams of the Indian Army had undertaken the rescue operation. pic.twitter.com/kymVOLzPCm
— ANI (@ANI) February 9, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.