ಲಕ್ನೋ: ರಾಜಕೀಯವಾಗಿ ಅತ್ಯಂತ ಮಹತ್ವ ಪಡೆದುಕೊಂಡಿರುವ ಉತ್ತರಪ್ರದೇಶದಲ್ಲಿ ನಾಳೆಯಿಂದ ಚುನಾವಣೆ ಆರಂಭವಾಗುತ್ತಿದೆ. ಮೊದಲ ಹಂತದ ಮತದಾನಕ್ಕೆ ಚುನಾವಣಾ ಆಯೋಗ ಸರ್ವಸಿದ್ಧತೆ ಮಾಡಿಕೊಂಡಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದೆ. ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.
ಮೊದಲ ಹಂತದ ಚುನಾವಣಾ ಕಣದಲ್ಲಿ ರಾಜ್ಯದ 11 ಜಿಲ್ಲೆಗಳ 58 ಸ್ಥಾನಗಳಿಗೆ ಮತದಾನ ನಡೆಯಲಿದ್ದು, 623 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮಾಜಿ ಗವರ್ನರ್ ಬೇಬಿ ರಾಣಿ ಮೌರ್ಯ, ಬಿಜೆಪಿ ಸಚಿವರಾದ ಶ್ರೀಕಾಂತ್ ಶರ್ಮಾ, ಸುರೇಶ್ ರಾಣಾ, ಸಂದೀಪ್ ಸಿಂಗ್, ಕಪಿಲ್ ದೇವ್ ಅಗರ್ವಾಲ್, ಅತುಲ್ ಗಾರ್ಗ್ ಮತ್ತು ಚೌಧುರಿ ಲಕ್ಷ್ಮಿ ನಾರಾಯಣ್ ಸೇರಿದಂತೆ ಹಲವಾರು ಘಟಾನುಘಟಿ ನಾಯಕರು ಕಣದಲ್ಲಿದ್ದು, ಮತ ಪರೀಕ್ಷೆಗೆ ಅಣಿಯಾಗಲಿದ್ದಾರೆ.
ಉತ್ತರಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 10ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ.
ಸಮಾಜವಾದಿ, ಬಹು ಜನ ಸಮಾಜವಾದಿ, ಕಾಂಗ್ರೆಸ್ ಮತ್ತು ಬಿಜೆಪಿ ಚುನಾವಣಾ ಕಣದಲ್ಲಿರುವ ಪ್ರಮುಖ ಪಕ್ಷಗಳಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.