ನವದೆಹಲಿ: ಸತತ 10ನೇ ಬಾರಿಗೆ ಆರ್ಬಿಐ ತನ್ನ ಪ್ರಮುಖ ಬಡ್ಡಿ ದರ ರೆಪೋದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ. ಪ್ರಸ್ತುತ ರೆಪೋ ದರ ಶೇ 4ರಷ್ಟಿದ್ದು, ರಿವರ್ಸ್ ರೆಪೋ ದರ ಶೇ 3.35ರಷ್ಟಿದೆ.
ದೇಶದ ಆರ್ಥಿಕ ಸ್ಥಿತಿಗತಿಯನ್ನು ಗಮನದಲ್ಲಿರಿಸಿಕೊಂಡು ಆರ್ಬಿಐ ತನ್ನ ಪ್ರಮುಖ ಬಡ್ಡಿದರಗಳಾದ ರೆಪೋ ಹಾಗು ರಿವರ್ಸ್ ರೆಪೋದಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ಹಣಕಾಸು ವರ್ಷ 2021-22ರಲ್ಲಿ ದೇಶದ ಆರ್ಥಿಕ ಪ್ರಗತಿ ದರ ಶೇ 9.2ರಷ್ಟಿದ್ದು, ಇದು ದೇಶದ ಬೆಳವಣಿಗೆಯನ್ನು ಕೋವಿಡ್ ಸಾಂಕ್ರಾಮಿಕಕ್ಕೂ ಪೂರ್ವದ ವರ್ಷಕ್ಕೆ ಕೊಂಡೊಯ್ಯುತ್ತದೆ. 2022-23ನೇ ಹಣಕಾಸು ವರ್ಷವು ಶೇ 7.8ರಷ್ಟು ಬೆಳವಣಿಗೆ ಸಾಧಿಸಲಿದೆ. ದೇಶದಲ್ಲಿ ಹಣಕಾಸು ವರ್ಷ 2022ರಲ್ಲಿ ಸಗಟು ಹಣದುಬ್ಬರ ದರವು ಶೇ 5.3ರಷ್ಟಿರಲಿದ್ದು, 2022-23ರಲ್ಲಿ ಶೇ 4.5ರಷ್ಟಿರಲಿದೆ ಎಂದು ಆರ್ಬಿಐ ಅಂದಾಜಿಸಿದೆ ಎಂದಿದ್ದಾರೆ.
ಇ-ರುಪಿ ಡಿಜಿಟಲ್ ವೋಚರ್ಗಳಿಗಿದ್ದ ಸದ್ಯದ ಮಿತಿಯನ್ನು 10 ಸಾವಿರ ರೂಪಾಯಿಯಿಂದ 1 ಲಕ್ಷಕ್ಕೇರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರ ದೇಶದಲ್ಲಿ ಹಣದುಬ್ಬರ ದರವನ್ನು ಶೇ 2 ರಿಂದ 6ರ ಮಿತಿಯೊಳಗೆ ಕಾಯ್ದುಕೊಳ್ಳಬೇಕೆಂದು ಆರ್ಬಿಐ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.