ನವದೆಹಲಿ: ಭಾರತದ ವೃತ್ತಿಪರ ಕುಸ್ತಿಪಟು ʼಗ್ರೇಟ್ ಖಲಿʼ ಎಂದೇ ಪ್ರಖ್ಯಾತರಾದ ದಲೀಪ್ ಸಿಂಗ್ ರಾಣಾ ಅವರು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಗೂ ಮುಂಚಿತವಾಗಿ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವುದು ಭಾರೀ ಕುತೂಹಲ ಕೆರಳಿಸಿದೆ. ಇಂದು ಮಧ್ಯಾಹ್ನ ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಬಿಜೆಪಿ ಸೇರಿದ್ದಕ್ಕೆ ಖುಷಿಯಾಗುತ್ತಿದೆ. ಪ್ರಧಾನಿ ಮೋದಿಯವರು ದೇಶಕ್ಕಾಗಿ ಮಾಡಿದ ಕೆಲಸ ಅವರನ್ನು ಸರಿಯಾದ ಪ್ರಧಾನಿಯನ್ನಾಗಿ ಮಾಡಿದೆ ಎಂದು ನಾನು ಭಾವಿಸುತ್ತೇನೆ. ಆದ್ದರಿಂದ, ರಾಷ್ಟ್ರದ ಅಭಿವೃದ್ಧಿಗಾಗಿ ಅವರ ಆಡಳಿತದ ಭಾಗವಾಗಬೇಕು ಎಂದು ನಾನು ಯೋಚಿಸಿದೆ. ಬಿಜೆಪಿಯ ರಾಷ್ಟ್ರೀಯ ನೀತಿಯಿಂದ ಪ್ರಭಾವಿತನಾಗಿ ಬಿಜೆಪಿ ಸೇರಿದ್ದೇನೆ” ಎಂದಿದ್ದಾರೆ.
Wrestler The Great Khali joins Bharatiya Janata Party in Delhi pic.twitter.com/ixWuH8d64T
— ANI (@ANI) February 10, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.