ಬೆಂಗಳೂರು: ಶೀಘ್ರದಲ್ಲೇ ಶಾಲಾ-ಕಾಲೇಜು ತೆರೆಯುವಂತೆ ಹೈಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸೋಮವಾರದಿಂದ 10 ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.
ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಸೋಮವಾರ 10 ನೇ ತರಗತಿವರೆಗೆ ಶಾಲೆ ಆರಂಭ ಮಾಡುತ್ತೇವೆ.
ನಾಳೆ ಸಂಜೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಆಯಾ ಜಿಲ್ಲೆಯ ಪರಿಸ್ಥಿತಿಗೆ ಅನುಗುಣವಾಗಿ ಶಾಲಾ- ಕಾಲೇಜು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
“ಸೋಮವಾರದಿಂದ ಹೈಸ್ಕೂಲ್ ಆರಂಭವಾಗುತ್ತದೆ. ಸದ್ಯಕ್ಕೆ ಡಿಗ್ರಿ ಮತ್ತು ಪಿಯುಸಿ ಕಾಲೇಜು ಆರಂಭ ಇಲ್ಲ. ಎರಡನೇ ಹಂತದಲ್ಲಿ ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಎಲ್ಲ ಜಿಲ್ಲೆಗಳ ಜೊತೆ ಸಂಪರ್ಕದಲ್ಲಿ ಇರುತ್ತೇವೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಕ್ರಮಕೈಗೊಳ್ಳುತ್ತೇವೆ. ಎಲ್ಲಾ ಶಾಲೆಗಳ ಶಿಕ್ಷಕರು ಪೋಷಕರ ಜೊತೆ ಸಂಪರ್ಕದಲ್ಲಿರುತ್ತೇವೆ” ಎಂದು ಸಿಎಂ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.