ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ ಒನ್ ಓಶಿಯನ್ ಸಮಿಟ್ನ ಉನ್ನತ ಮಟ್ಟದ ವಿಭಾಗವನ್ನು ವೀಡಿಯೊ ಸಂದೇಶದ ಮೂಲಕ ಉದ್ದೇಶಿಸಿ ಮಾತನಾಡಲಿದ್ದಾರೆ.
ಶೃಂಗಸಭೆಯಲ್ಲಿ ಜರ್ಮನಿ, ಯುನೈಟೆಡ್ ಕಿಂಗ್ಡಮ್, ದಕ್ಷಿಣ ಕೊರಿಯಾ, ಜಪಾನ್ ಮತ್ತು ಕೆನಡಾ ಸೇರಿದಂತೆ ಹಲವಾರು ರಾಜ್ಯಗಳು ಮತ್ತು ಸರ್ಕಾರಗಳು ಭಾಗಿಯಾಗಿ ಸಂದೇಶ ನೀಡಲಿವೆ.
ವಿಶ್ವಸಂಸ್ಥೆ ಮತ್ತು ವಿಶ್ವಬ್ಯಾಂಕ್ನ ಸಹಕಾರದೊಂದಿಗೆ ಬ್ರೆಸ್ಟ್ನಲ್ಲಿ ಫೆಬ್ರವರಿ 9 ರಿಂದ 11 ರವರೆಗೆ ಒನ್ ಓಶಿಯನ್ ಸಮಿಟ್ ಅನ್ನು ಫ್ರಾನ್ಸ್ ಆಯೋಜಿಸುತ್ತಿದೆ.
ಆರೋಗ್ಯಕರ ಮತ್ತು ಸುಸ್ಥಿರ ಸಾಗರ ಪರಿಸರ ವ್ಯವಸ್ಥೆಗಳನ್ನು ಸಂರಕ್ಷಿಸಲು ಮತ್ತು ಬೆಂಬಲಿಸಲು ಸ್ಪಷ್ಟವಾದ ಕ್ರಮವನ್ನು ತೆಗೆದುಕೊಳ್ಳಲು ಅಂತರರಾಷ್ಟ್ರೀಯ ಸಮುದಾಯವನ್ನು ಸಜ್ಜುಗೊಳಿಸುವುದು ಶೃಂಗಸಭೆಯ ಉದ್ದೇಶವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.