ನವದೆಹಲಿ: ನಾಗಾಲ್ಯಾಂಡ್ನ ದಿಮಾಪುರ್-ಕೊಹಿಮಾ ಹೊಸ ಬಿಜಿ ಲೈನ್ ಯೋಜನೆಯನ್ನು ಪ್ರಧಾನ ಮಂತ್ರಿಗಳ ಕಾರ್ಯಾಲಯವು ಅತ್ಯಂತ ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೇ (ನಿರ್ಮಾಣ) ಮುಖ್ಯ ಆಡಳಿತಾಧಿಕಾರಿ-1 ಎಂದು ಹೆಚ್ ಎಸ್ ಯಾದವ್ ಗುರುವಾರ ಮಾಹಿತಿ ನೀಡಿದ್ದಾರೆ.
ಧನಸಿರಿಯಿಂದ ಶುಖೋವಿವರೆಗಿನ ಯೋಜನೆಯ ಹಂತ-1 ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಮಾರ್ಗದಲ್ಲಿ ರೈಲುಗಳು ಸಂಚಾರ ಪ್ರಾರಂಭಿಸಲಿವೆ ಎಂದು ಮಾಹಿತಿ ನೀಡಿದ ಅವರು, ಶುಖೋವಿಯಿಂದ ಫೆರಿಮಾದವರೆಗೆ ಹಂತ-II (28 ಕಿಮೀ) ನಿರ್ಮಾಣ ಹಂತದಲ್ಲಿದೆ ಮತ್ತು ಜುಲೈ 2023 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಮತ್ತು ಫೆರಿಮಾದಿಂದ ಕೊಹಿಮಾ ಬಳಿಯ ಜುಬ್ಜಾವರೆಗಿನ ಹಂತ-III (38 ಕಿಮೀ) ಮಾರ್ಚ್ 2026 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನಾಗಾಲ್ಯಾಂಡ್ ಮೇಘಾಲಯ ಮತ್ತು ತ್ರಿಪುರಾ ಜೊತೆಗೆ 2023 ರ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ನಿರೀಕ್ಮಷೆ ಇದೆ. ಹೀಗಾಗಿ ಅಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳನ್ನು ತ್ವರಿತವಾಗಿ ಅಂತಿಮಗೊಳಿಸಲು ಸರ್ಕಾರ ಮುಂದಾಗಿದೆ.
82.50 ಕಿಮೀ ಉದ್ದದ ಈ ಮಾರ್ಗದಲ್ಲಿ ಎಂಟು ನಿಲ್ದಾಣಗಳು ಮತ್ತು 20 ಸುರಂಗಗಳು ಇದ್ದು, ಇದು ಒಟ್ಟು 29.30 ಕಿಮೀ ಉದ್ದವನ್ನು ಒಳಗೊಂಡಿರುತ್ತವೆ ಎಂದು ಹಿರಿಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.