ಬೆಂಗಳೂರು: ವರ್ಷದ ಮೊದಲ ಉಡಾವಣೆಗೆ ಇಸ್ರೋ ಸಜ್ಜಾಗಿದೆ. ಪಿಎಸ್ಎಲ್ವಿ-ಸಿ 52 ರಾಕೆಟ್ ಅನ್ನು ನಾಳೆ ಉಡಾವಣೆ ಆಗಲಿದ್ದು, ಕ್ಷಣಗಣನೆ ಆರಂಭವಾಗಿದೆ. ಈ ರಾಕೆಟ್ ಮೂಲಕ ಎರಡು ದೇಶದ ರಾಡಾರ್ ಇಮೇಜಿಂಗ್ ಉಪಗ್ರಹವಾದ RISAT-1A ಅನ್ನು ಉಡಾವಣೆ ಮಾಡಲಾಗುತ್ತದೆ.
ಈ ಭೂ ವೀಕ್ಷಣಾ ಉಪಗ್ರಹ ಕೃಷಿ, ಅರಣ್ಯ ಮತ್ತು ತೋಟಗಳು, ಮಣ್ಣಿನ ತೇವಾಂಶ ಮತ್ತು ಜಲವಿಜ್ಞಾನ ಮತ್ತು ಪ್ರವಾಹ ಮ್ಯಾಪಿಂಗ್ ಅಪ್ಲಿಕೇಶನ್ಗಳಿಗಾಗಿ ಕೆಲಸ ಮಾಡಲಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ಉತ್ತಮ ಗುಣಮಟ್ಟದ ಚಿತ್ರಗಳನ್ನು ಭೂಮಿಗೆ ರವಾನಿಸಲಿದೆ.
ಭೂ ವೀಕ್ಷಣಾ ಉಪಗ್ರಹದಲ್ಲಿ INSPIREsat-1 ಮತ್ತು INS-2TD ಸೇರಿದಂತೆ ಒಟ್ಟು ಮೂರು ಸಣ್ಣ ಉಪಗ್ರಹಗಳಿರಲಿವೆ. ಸೋಮವಾರ ಬೆಳಗ್ಗೆ 5.59ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಮೊದಲ ಉಡಾವಣಾ ಪ್ಯಾಡ್ನಿಂದ ಉಡಾವಣೆಗೊಳ್ಳಲಿದೆ.
ಈ ಉಪಗ್ರಹವು ಐದು ವರ್ಷಗಳ ಕಾಲ ಕಾರ್ಯಾಚರಣೆ ನಡೆಸುತ್ತದೆ, ಹಗಲು- ರಾತ್ರಿಯ ವೇಳೆಯು ಕಾರ್ಯನಿರ್ವಹಣೆ ಮಾಡುತ್ತದೆ. ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಇರುವ ಈ ಉಪಗ್ರಹ ರಾಷ್ಟ್ರದ ರಕ್ಷಣೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಲಾಗುತ್ತದೆ.
PSLV-C52/EOS-04 Mission: The countdown process of 25 hours and 30 minutes leading to the launch has commenced at 04:29 hours today. https://t.co/BisacQy5Of pic.twitter.com/sgGIiUnbvo
— ISRO (@isro) February 13, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.