ನವದೆಹಲಿ: ಇಂದು ಉತ್ತರಾಖಂಡ, ಗೋವಾ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಮತದಾನ ನಡೆಯುತ್ತಿದೆ.
ಗೋವಾ ಮತ್ತು ಉತ್ತರಾಖಂಡದಲ್ಲಿ ಒಂದೇ ಹಂತದ ವಿಧಾನಸಭೆ ಚುನಾವಣೆಗೆ ಹಾಗೂ ಉತ್ತರ ಪ್ರದೇಶದಲ್ಲಿ ಎರಡನೇ ಹಂತದ ವಿಧಾನಸಭೆ ಚುನಾವಣೆಗೆ ಶಾಂತಿಯುತವಾಗಿ ಮತದಾನ ಆರಂಭವಾಗಿದೆ. ಸಂಜೆ 6.00 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಹಂತದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಮತದಾನವನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳು ಮತ್ತು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಸಮಯವನ್ನು ಒಂದು ಗಂಟೆ ವಿಸ್ತರಿಸಲು ಚುನಾವಣಾ ಆಯೋಗ ನಿರ್ಧರಿಸಿದೆ.
ಚುನಾವಣೆ ಹಿನ್ನೆಲೆಯಲ್ಲಿ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಮತದಾನ ಮಾಡಲು ಅರ್ಹರಾಗಿರುವ ಎಲ್ಲರಿಗೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ಕರೆ ನೀಡಿದರು.
ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಗೋವಾದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಗೃಹ ಸಚಿವ ಅಮಿತ್ ಶಾ ಅವರು ಕೇಳಿಕೊಂಡಿದ್ದಾರೆ. ಸ್ಥಿರ, ನಿರ್ಣಾಯಕ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ಮಾತ್ರ ರಾಜ್ಯದ ಅಭಿವೃದ್ಧಿಯನ್ನು ಈ ಚುನಾವಣೆ ಖಚಿತಪಡಿಸುತ್ತದೆ. ಎಲ್ಲಾ ಮತದಾರರ ಒಂದೊಂದು ಮತಗಳು ರಾಜ್ಯದ ಉಜ್ವಲ ಮತ್ತು ಸುಭದ್ರ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅವರು ಮನವಿ ಮಾಡಿದ್ದಾರೆ.
Polling will be held across Uttarakhand, Goa and in parts of Uttar Pradesh. I call upon all those whose are eligible to vote today to do so in record numbers and strengthen the festival of democracy.
— Narendra Modi (@narendramodi) February 14, 2022
एक भ्रष्टाचार और तुष्टिकरण से मुक्त सरकार ही देवभूमि उत्तराखंड के विकास, गौरव और सम्मान को आगे ले जा सकती है।
इसलिए मैं उत्तराखंड के सभी मतदाताओं से अपील करता हूँ कि आप मतदान करके प्रदेश के विकास और प्रगति में सहभागी बने।
पहले मतदान, फिर जलपान।
— Amit Shah (@AmitShah) February 14, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.