ಕಾನ್ಪುರ: ಇಂದು ಉತ್ತರ ಪ್ರದೇಶದ ಕಾನ್ಪುರ ದೆಹತ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿ ಚುನಾವಣೆಯಲ್ಲೂ ವಿರೋಧ ಪಕ್ಷಗಳು ಹೊಸ ಮೈತ್ರಿ ಮಾಡಿಕೊಳ್ಳುತ್ತವೆ ಎನ್ನುವ ಮೂಲಕ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
“ಪ್ರತಿ ಚುನಾವಣೆಯಲ್ಲಿ ಇವರುಗಳು ಹೊಸ ಮೈತ್ರಿಗಳನ್ನು ಕರೆತರುತ್ತಾರೆ ಮತ್ತು ಅವರ ಮೂಲಕ ಮುನ್ನಡೆಯಲು ಪ್ರಯತ್ನಿಸುತ್ತಾರೆ. ಅವರು ಪ್ರತಿ ಚುನಾವಣೆಯಲ್ಲಿ ತಮ್ಮ ಹಳೆಯ ಮೈತ್ರಿಯವರನ್ನು ಹೊರಹಾಕುತ್ತಾರೆ. ತಮ್ಮ ಸ್ನೇಹಿತರನ್ನು ಬದಲಾಯಿಸುವವರು ಉತ್ತರ ಪ್ರದೇಶದ ಜನರಿಗೆ ಸೇವೆ ಸಲ್ಲಿಸುತ್ತಾರೆಯೇ” ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.
ಸಮಾಜವಾದಿ ಪಕ್ಷವು 2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳದೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಹೋರಾಡುತ್ತಿದೆ. 2017ರಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು.
“ಯೋಗಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತೆ ಬರಲಿದೆ. ಪ್ರತಿ ಜಾತಿ, ವರ್ಗ, ಗ್ರಾಮ ಮತ್ತು ನಗರದ ಜನರು ಯುಪಿಯ ತ್ವರಿತ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಮತ ಹಾಕುತ್ತಿದ್ದಾರೆ. ತಾಯಿ, ಸಹೋದರಿಯರು ಮತ್ತು ಹೆಣ್ಣುಮಕ್ಕಳು ಬಿಜೆಪಿ ಗೆಲ್ಲಬೇಕೆಂದು ಬಯಸುತ್ತಾರೆ” ಎಂದು ಪ್ರಧಾನಿ ಮೋದಿ ಸೋಮವಾರ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಏಳು ಹಂತದ ಚುನಾವಣೆ ಮಾರ್ಚ್ನಲ್ಲಿ ಮುಕ್ತಾಯವಾಗಲಿದೆ. ಮಾರ್ಚ್ 10 ರಂದು ಮತಗಳ ಎಣಿಕೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.