ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಕ್ಕೆ ಏಪ್ರಿಲ್ ತಿಂಗಳಿನಿಂದ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿಯನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ನಿನ್ನೆ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಈ ಘೋಷಣೆ ಮಾಡಿದ್ದಾರೆ.
ಪ್ರಸ್ತುತ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಒಬ್ಬರಿಗೆ 5 ಕೆಜಿಯಂತೆ ಆಹಾರಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದೆ. ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿ ಉಚಿತವಾಗಿ ನೀಡಲು ಆದೇಶಿಸಿದ್ದು, ಎಪ್ರಿಲ್ ತಿಂಗಳಿನಿಂದ ಇದು ಜಾರಿಗೆ ಬರಲಿದೆ ಎಂದಿದ್ದಾರೆ.
ಸರ್ಕಾರದ ಈ ನಿರ್ಧಾರದಿಂದಾಗಿ 1.14 ಕೋಟಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರಯೋಜನ ಸಿಗಲಿದೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.