ಒಟ್ಟಾವ: ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಕೆನಡಾದಲ್ಲಿ ದೊಡ್ಡಮಟ್ಟದ ಪ್ರತಿಭಟನೆಗಳು ನಡೆಯುತ್ತಿವೆ. ಈ ಪ್ರತಿಭಟನೆಗಳನ್ನು ಶಮನಗೊಳಿಸುವ ಸಲುವಾಗಿ ಅಲ್ಲಿನ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೋ ಅವರು ಸೋಮವಾರ ಸಾರ್ವಜನಿಕ ತುರ್ತುಪರಿಸ್ಥಿತಿಯನ್ನು ಜಾರಿಗೆ ತಂದಿದ್ದಾರೆ.
ತೀವ್ರ ಸ್ವರೂಪದ ಪ್ರತಿಭಟನೆಯ ಕಾರಣದಿಂದಾಗಿ ಕೆನಡಾ ರಾಜಧಾನಿ ಒಟ್ಟಾವ ಸಂಪೂರ್ಣ ಸ್ತಬ್ದಗೊಂಡಿದೆ. ಅಲ್ಲಿ ಟ್ರಕ್ಗಳು ದಿಗ್ಬಂಧನ ವಿಧಿಸಿವೆ. ಇಡಿ ದೇಶಕ್ಕೂ ಪ್ರತಿಭಟನೆಗಳು ಹರಡುತ್ತಿವೆ.
ಇದೀಗ ಸಾರ್ವಜನಿಕ ತುರ್ತುಪರಿಸ್ಥಿತಿಯನ್ನು ಜಾರಿಗೆ ತಂದಿರುವ ಕಾರಣ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಸರಕಾರಕ್ಕೆ ಹೆಚ್ಚಿನ ಅಧಿಕಾರ ದೊರಕಲಿದೆ. ಪ್ರತಿಭಟನೆಯಲ್ಲಿ ತೊಡಗಿರುವವರ ಬ್ಯಾಂಕ್ ಖಾತೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಬಹುದು, ಪ್ರತಿಭಟನಾಕಾರರನ್ನು ಚದುರಿಸಬಹುದಾಗಿದೆ.
ಕಾನೂನು ಬಾಹಿರ ಮತ್ತು ಅಪಾಯಕಾರಿ ಚಟುವಟಿಕೆಗಳನ್ನು ಸುಮ್ಮನೆ ಬಿಡಲು ಸಾಧ್ಯವಿಲ್ಲ. ಅದಕ್ಕೆ ಅನುಮತಿಯೂ ಇಲ್ಲ ಎಂದು ಎರಡು ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಟ್ರುಡೋ ಹೇಳಿದ್ದಾರೆ.
ಇನ್ನೊಂದೆಡೆ ಟ್ರುಡೋ ವಿರುದ್ಧ ಭಾರತದಲ್ಲಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ರೈತ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯನ್ನು ಬೆಂಬಲಿಸಿದ ಟ್ರುಡೋ ಅವರಿಗೆ ತಕ್ಕ ಶಾಸ್ತಿಯಾಗಿದೆ. ಕರ್ಮ ಯಾರನ್ನೂ ಬಿಡುವುದಿಲ್ಲ ಎನ್ನುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.