News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಖ್ಯಾತ ಸಾಹಿತಿ ಚೆನ್ನವೀರ ಕಣವಿ ನಿಧನ

ಧಾರವಾಡ: ಕನ್ನಡ ನಾಡಿನ ಶ್ರೇಷ್ಠ ಕವಿಗಳಲ್ಲಿ ಒಬ್ಬರಾದ ಚೆನ್ನವೀರ ಕಣವಿ ಅಸ್ತಂಗತರಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

 ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್ ಎಂದು ಪ್ರಸಿದ್ಧಿರಾದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಇವರು ಒಬ್ಬರು.

ಚನ್ನವೀರ ಕಣವಿಯವರು ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928ರ ಜೂನ್ 28ರಂದು ಜನಿಸಿದರು. ತಂದೆ ಸಕ್ಕರೆಪ್ಪ ಮತ್ತು ತಾಯಿ ಪಾರ್ವತವ್ವ. ತಂದೆ ಸಕ್ಕರೆಪ್ಪ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಧಾರವಾಡದಲ್ಲಿಯೆ ಮಾಧ್ಯಮಿಕ ಹಾಗು ಕಾಲೇಜು ಶಿಕ್ಷಣ ಪೂರೈಸಿ ಕಣವಿಯವರು 1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದು ಆಗ ತಾನೆ ಆರಂಭವಾಗಿದ್ದ ವಿಶ್ವವಿದ್ಯಾಲಯದ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾದರು. 1956ರ ವೇಳೆಗೆ ಅದೇ ವಿಭಾಗದ ನಿರ್ದೇಶಕರಾಗಿ 1983 ರವರೆಗೆ ಸೇವೆ ಸಲ್ಲಿಸಿದರು. ಅವರ ಪತ್ನಿ ಶಾಂತಾದೇವಿ ಅವರು ಕೂಡ ಸಾಹಿತ್ಯ ಸಂಸ್ಕೃತಿಯ ಒಲವುಳ್ಳ ದೊಡ್ಡ ಮನೆತನದಿಂದ ಬಂದವರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top