ನವದೆಹಲಿ: ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ಬಪ್ಪಿ ಲಹಿರಿ ಅವರು ಇಂದು ಬೆಳಗ್ಗೆ ಮುಂಬೈಯ ಕೃತಿ ಕೇರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ನಿದ್ರೆ ಸಂಬಂಧಿ ಕಾಯಿಲೆ ಮತ್ತು ಎದೆನೋವಿನಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಬಪ್ಪಿ ಲಹಿರಿ ಅವರು ಅನೇಕ ಬಾಲಿವುಡ್ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಡಿಸ್ಕೋ ಪ್ರಕಾರದ ನೃತ್ಯ ಸಂಗೀತವನ್ನು ಭಾರತಕ್ಕೆ ಪರಿಚಯಿಸಿದವರಲ್ಲಿ ಇವರು ಕೂಡ ಒಬ್ಬರು.
ಬಪ್ಪಿ ಲಹಿರಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
Shri Bappi Lahiri Ji’s music was all encompassing, beautifully expressing diverse emotions. People across generations could relate to his works. His lively nature will be missed by everyone. Saddened by his demise. Condolences to his family and admirers. Om Shanti. pic.twitter.com/fLjjrTZ8Jq
— Narendra Modi (@narendramodi) February 16, 2022
Pained to learn about the passing away of legendary singer and composer, Bappi Lahiri Ji. His demise leaves a big void in the world of Indian music. Bappi Da will be remembered for his versatile singing and lively nature. My condolences to his family and admirers. Om Shanti.
— Amit Shah (@AmitShah) February 16, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.