ನವದೆಹಲಿ: 50ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಅವುಗಳಲ್ಲಿ ಹತ್ತು ಸ್ಟಾರ್ಟ್ಅಪ್ಗಳು 50 ಕೋಟಿ ರೂಪಾಯಿಗಿಂತ ಹೆಚ್ಚಿನ ಅನುದಾನವನ್ನು ಹೊಂದಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ.
ನವದೆಹಲಿಯ ಪೃಥ್ವಿಅ ಭವನದಲ್ಲಿ ಎಲ್ಲಾ ವಿಜ್ಞಾನ ಸಚಿವಾಲಯಗಳು ಮತ್ತು ವಿಜ್ಞಾನ ಇಲಾಖೆಗಳ ಉನ್ನತ ಮಟ್ಟದ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಖಾಸಗಿಯವರಿಗೆ ಬಾಹ್ಯಾಕಾಶ ವಲಯವನ್ನು ತೆರೆದ ನಂತರ, ನವೀನ ಸ್ಟಾರ್ಟ್-ಅಪ್ಗಳು ಬಳಕೆಯಾಗದ ಸಾಮರ್ಥ್ಯವನ್ನು ಅನ್ವೇಷಿಸಲು ದೊಡ್ಡ ರೀತಿಯಲ್ಲಿ ಹೊರ ಬರುತ್ತಿವೆ ಎಂದು ಹೇಳಿದ್ದಾರೆ.
50 ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿವೆ ಮತ್ತು ಅವುಗಳಲ್ಲಿ ಸುಮಾರು ಹತ್ತು ಸ್ಟಾರ್ಟ್ಅಪ್ಗಳು 50 ಕೋಟಿ ರೂಪಾಯಿಗಳ ಅನುದಾನವನ್ನು ಹೊಂದಿವೆ ಎಂದ ಅವರು, ಸ್ಟಾರ್ಟ್-ಅಪ್ಗಳು ಜಾಗತಿಕ ಪರಿಣಾಮಗಳನ್ನು ಹೊಂದಿರುವ ಬಾಹ್ಯಾಕಾಶದಲ್ಲಿ ಡೆಬ್ರಿಸ್ ನಿರ್ವಹಣೆಗೆ ಸಾಫ್ಟ್ವೇರ್ ಪರಿಹಾರಗಳ ಮೇಲೆ ಕಾರ್ಯನಿರ್ವಹಿಸುತ್ತಿವೆ. ಇದುವರೆಗೆ ಸರ್ಕಾರದ 38 ಸಚಿವಾಲಯಗಳು ವಿವಿಧ ಕ್ಷೇತ್ರಗಳಲ್ಲಿ ತಂತ್ರಜ್ಞಾನದ ಬೆಂಬಲವನ್ನು ಕೋರಿವೆ ಎಂದು ಮಾಹಿತಿ ನೀಡಿದರು.
ವೈಜ್ಞಾನಿಕ ಅಪ್ಲಿಕೇಶನ್ಗಳು ಮತ್ತು ತಾಂತ್ರಿಕ ಬೆಂಬಲ ಮತ್ತು ಪರಿಹಾರಗಳಿಗಾಗಿ 38 ಸಚಿವಾಲಯಗಳು ಮತ್ತು ಇಲಾಖೆಗಳಿಂದ 200 ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿದೆ ಎಂದು ಸಿಂಗ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.