ನವದೆಹಲಿ: ಭಾರತದ ಕೋಚಿಂಗ್ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ಭಾರತ ಸರ್ಕಾರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಭಾರತೀಯ ಕ್ರೀಡಾ ಪ್ರಾಧಿಕಾರ 21 ವಿಭಾಗಗಳಲ್ಲಿ ವಿವಿಧ ಹಂತಗಳಲ್ಲಿ 398 ತರಬೇತುದಾರರನ್ನು ನೇಮಿಸಿದೆ.
ಒಟ್ಟು 398 ಮಂದಿಯಲ್ಲಿ ಅನೇಕರು ಮಾಜಿ-ಅಂತಾರಾಷ್ಟ್ರೀಯ ಕ್ರೀಡಾಪಟುಗಳು, ವಿಶ್ವ ಚಾಂಪಿಯನ್ಷಿಪ್ಗಳು ಮತ್ತು ಒಲಿಂಪಿಕ್ಸ್ನಂತಹ ಪ್ರಮುಖ ಕೂಟಗಳಲ್ಲಿ ಸ್ಪರ್ಧಿಸಿರುವ ಅಥವಾ ಪದಕಗಳನ್ನು ಗೆದ್ದಿರುವ ಅರ್ಜುನ ಪ್ರಶಸ್ತಿ ಪುರಸ್ಕೃತರು ಸೇರಿದ್ದಾರೆ.
2024, 2028 ರ ಒಲಿಂಪಿಕ್ ಸೇರಿದಂತೆ ಪ್ರಮುಖ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸ್ಪರ್ಧೆಗಳಿಗೆ ಸಜ್ಜಾಗುತ್ತಿರುವ ಕ್ರೀಡಾಪಟುಗಳಿಗೆ 360 ದಿನವೂ ಪೂರ್ಣ ಪ್ರಮಾಣದ ಬೆಂಬಲವನ್ನು ಒದಗಿಸಲು ಕ್ರೀಡಾ ಯುವ ವ್ಯವಹಾರಗಳ ಸಚಿವಾಲಯದ ಪ್ರಯತ್ನದ ಭಾಗವಾಗಿ ಈ ನೇಮಕಾತಿ ಮಾಡಲಾಗಿದೆ. ಅತ್ಯುನ್ನತ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಪದಕಗಳನ್ನು ಗೆದ್ದ ಕ್ರೀಡಾಪಟುಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದಾರೆ ಮತ್ತು ಆಯ್ಕೆಯಾಗಿದ್ದಾರೆ ಎಂದು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.
ಅಲ್ಲದೆ, ಮಾಜಿ ಅಂತಾರಾಷ್ಟ್ರೀಯ ಕ್ರೀಡಾಪಟುಗಳು ವ್ಯವಸ್ಥೆಯಲ್ಲಿ ಸೇರ್ಪಡೆಯಾಗುವುದರಿಂದ ಕ್ರೀಡಾಪಟುಗಳಿಗೆ ತರಬೇತಿ ನೀಡುವುದರ ಜೊತೆಗೆ, ವಿಶ್ವ ಹಂತದಲ್ಲಿ ಸ್ಪರ್ಧಿಸುವಾಗ ಯಶಸ್ಸಿಗೆ ಪ್ರಮುಖವಾದ ಮಾನಸಿಕ ಸದೃಢತೆಯ ತರಬೇತಿ ನೀಡಲು ಸಾಧ್ಯವಾಗುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.