ಮುಂಬಯಿ: ಅಸ್ಸಾಂ ಮುಖ್ಯಮಂತ್ರಿ ಡಾ ಹಿಮಂತ ಬಿಸ್ವ ಶರ್ಮಾ ಅವರು ಬುಧವಾರ ಮುಂಬಯಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಕೈಗಾರಿಕೋದ್ಯಮಿ, ಲೋಕೋಪಕಾರಿ ಮತ್ತು ಟಾಟಾ ಟ್ರಸ್ಟ್ನ ಅಧ್ಯಕ್ಷ ರತನ್ ಟಾಟಾ ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ಅಸ್ಸಾಂ ಬೈಭವ್” ಅನ್ನು ಪ್ರದಾನ ಮಾಡಿದರು.
ಕೈಗಾರಿಕೋದ್ಯಮಿ ಮತ್ತು ಲೋಕೋಪಕಾರಿಯಾಗಿ, ರತನ್ ಟಾಟಾ ಅವರು ಅಸ್ಸಾಂನಲ್ಲಿ ಕ್ಯಾನ್ಸರ್ ಆರೈಕೆಯನ್ನು ಹೆಚ್ಚಿಸಲು ಅಸಾಧಾರಣ ಕೊಡುಗೆಗಳನ್ನು ನೀಡಿದ್ದಾರೆ. ಅಸ್ಸಾಂ ಸರ್ಕಾರದ ಸಹಯೋಗದೊಂದಿಗೆ, ಟಾಟಾ ಟ್ರಸ್ಟ್ ರಾಜ್ಯದಾದ್ಯಂತ 20 ಅತ್ಯಾಧುನಿಕ ಕ್ಯಾನ್ಸರ್ ಕೇರ್ ಆಸ್ಪತ್ರೆಗಳನ್ನು ಸ್ಥಾಪಿಸಿದೆ.
“ಅಸ್ಸಾಂ ಬೈಭವ” ಪ್ರಶಸ್ತಿಯು ಪ್ರಶಸ್ತಿ ಪತ್ರ, ಪದಕ ಮತ್ತು ರೂ 5 ಲಕ್ಷ ನಗದು ಮೊತ್ತವನ್ನು ಒಳಗೊಂಡಿದೆ. ವೈಯಕ್ತಿಕ ಕಾರಣಗಳಿಂದಾಗಿ, ರತನ್ ಟಾಟಾ ಅವರು ಗುವಾಹಟಿಯ ಶ್ರೀಮಂತ ಶಂಕರದೇವ ಕಲಾಕ್ಷೇತ್ರದಲ್ಲಿ ಜನವರಿ 24, 2022 ರಂದು ನಡೆದ ಅಧಿಕೃತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ, ಅಲ್ಲಿ ರಾಜ್ಯಪಾಲ ಜಗದೀಶ್ ಮುಖಿ ಅವರು ರಾಜ್ಯದ ಮೂರು ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದರ 18 ವ್ಯಕ್ತಿಗಳಿಗೆ ಪ್ರದಾನ ಮಾಡಿದ್ದರು.
ರತನ್ ಟಾಟಾ ಅವರಿಗೆ ಈ ಪ್ರಶಸ್ತಿಯನ್ನು ನಿನ್ನೆ ಮುಂಬಯಿನಲ್ಲಿ ಪ್ರಧಾನ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.