ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಫೆಬ್ರವರಿ 18 ರಿಂದ 23 ರವರೆಗೆ ಜರ್ಮನಿ ಮತ್ತು ಫ್ರಾನ್ಸ್ಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ.
“ಜೈಶಂಕರ್ ಅವರು ಫೆಬ್ರವರಿ 18 ರಿಂದ 23 ರವರೆಗೆ ಜರ್ಮನಿ ಮತ್ತು ಫ್ರಾನ್ಸ್ಗೆ ಭೇಟಿ ನೀಡಲಿದ್ದಾರೆ. ಜರ್ಮನಿಯಲ್ಲಿ ಅವರು ಮ್ಯೂನಿಕ್ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೇ ಸಮ್ಮೇಳನದಲ್ಲಿ ಭಾಗವಹಿಸುವ ವಿದೇಶಾಂಗ ಮಂತ್ರಿಗಳು ಮತ್ತು ಇತರ ಪ್ರತಿನಿಧಿಗಳೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಜೈಶಂಕರ್ ಅವರ ಭೇಟಿಯ ಕುರಿತು ಮಾಹಿತಿ ನೀಡಿದ ಬಾಗ್ಚಿ, ಜೈಶಂಕರ್ ಅವರು ಇಂಡೋ-ಪೆಸಿಫಿಕ್ ಕುರಿತು ಪ್ಯಾನೆಲ್ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ಮ್ಯೂನಿಚ್ನಲ್ಲಿರುವ ನಮ್ಮ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ಮತ್ತು ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ಆಯೋಜಿಸಿರುವ ಆಜಾದಿ ಕಾ ಅಮೃತ್ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.
ಜರ್ಮನಿಯ ನಂತರ, ಜೈಶಂಕರ್ ಅವರು ಫ್ರಾನ್ಸ್ಗೆ ಭೇಟಿ ನೀಡಲಿದ್ದಾರೆ ಮತ್ತು ಅಲ್ಲಿನ ವಿದೇಶಾಂಗ ಸಚಿವ ಜೀನ್-ಯ್ವೆಸ್ ಲೆ ಡ್ರಿಯನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎಂದು ಬಾಗ್ಚಿ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.