ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಒಂಬತ್ತು ತಿಂಗಳಿಂದ ನಾಲ್ಕು ವರ್ಷದೊಳಗಿನ ಮಕ್ಕಳು ಮೋಟಾರ್ ಸೈಕಲ್ನಲ್ಲಿ ಪ್ರಯಾಣಿಸುವಾಗ ಹೆಲ್ಮೆಟ್ ಮತ್ತು ಮಗುವು ಬೀಳದಂತೆ ತಡೆಯುವ ರಕ್ಷಾಕವಚ ಧರಿಸುವುದನ್ನು ಕಡ್ಡಾಯಗೊಳಿಸಿದೆ.
ಕೇಂದ್ರ ಮೋಟಾರು ವಾಹನಗಳ (ಎರಡನೇ ತಿದ್ದುಪಡಿ) ನಿಯಮಗಳು, 2022 ಪ್ರಕಟವಾದ ದಿನಾಂಕದಿಂದ ಒಂದು ವರ್ಷದ ನಂತರ ಈ ನಿಯಮಗಳು ಜಾರಿಗೆ ಬರುತ್ತವೆ.
“ಮೋಟಾರು ವಾಹನ ಕಾಯಿದೆಯ ಸೆಕ್ಷನ್ 129 ರ ಅಡಿಯಲ್ಲಿ ಇದನ್ನು ಸೂಚಿಸಲಾಗಿದ್ದು, ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಸುರಕ್ಷತೆಗಾಗಿ ಕ್ರಮಗಳನ್ನು ಇದು ವಿವರಿಸಿದೆ. ಇದರನ್ವಯ ಈ ಮಕ್ಕಳು ಸವಾರಿ ಮಾಡುವಾಗ ಹೆಲ್ಮೆಟ್ ಧಾರಣೆ ಮತ್ತು ರಕ್ಷಾ ಕವಚ ಕಡ್ಡಾಯವಾಗಿದೆ” ಎಂದು ಸಚಿವಾಲಯ ತಿಳಿಸಿದೆ.
ಅಲ್ಲದೇ ದ್ವಿಚಕ್ರ ವಾಹನಗಳನ್ನು ಗಂಟೆಗೆ 40 ಕಿಮೀಗಿಂತ ಹೆಚ್ಚು ವೇಗದಲ್ಲಿ ಓಡಿಸುವಂತಿಲ್ಲ ಎಂದು ಸರ್ಕಾರವು ಸ್ಪಷ್ಟಪಡಿಸಿದೆ.
ರಕ್ಷಾ ಕವಚ ಬೆಲ್ಟ್ ಹೊಂದಿರುವ ಎದೆಗೆ ಧರಿಸುವ ಕವಚ, ಇದನ್ನು ಬೈಕ್ ಚಾಲನೆ ಮಾಡುವ ವ್ಯಕ್ತಿಯ ಭುಜಕ್ಕೆ ಜೋಡಿಸಲಾಗುತ್ತದೆ. ಮಗುವಿನ ದೇಹ ಚಾಲಕನಿಗೆ ಅಂಟಿದ ಮಾದರಿಯಲ್ಲಿಡಲು ಇದು ಸಹಾಯ ಮಾಡುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.