ನವದೆಹಲಿ: ಭಾರತದ ಕನಿಷ್ಠ 13 ವಿಮಾನ ನಿಲ್ದಾಣಗಳಿಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ನಂತರ ಮರುನಾಮಕರಣ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಔರಂಗಾಬಾದ್ ಸೇರಿದಂತೆ 13 ವಿಮಾನ ನಿಲ್ದಾಣಗಳಿಗೆ ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ಈ ಕುರಿತು ಸಂಪುಟ ಸಭೆ ತೀರ್ಮಾನ ಕೈಗೊಳ್ಳಲಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಡಾ.ಭಾಗವತ್ ಕರದ್ ತಿಳಿಸಿದ್ದಾರೆ.
ಬುಧವಾರ ಮಹಾರಾಷ್ಟ್ರದ ಔರಂಗಾಬಾದ್ ನಗರಕ್ಕೆ ಆಗಮಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಔರಂಗಬಾದ್ ವಿಮಾಣ ನಿಲ್ದಾಣಕ್ಕೆ ಮರಾಠ ರಾಜ ಛತ್ರಪತಿ ಸಂಭಾಜಿ ಅವರ ಹೆಸರನ್ನು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಈ ಹಿಂದೆಯೇ ಕೇಂದ್ರಕ್ಕೆ ಕಳುಹಿಸಲಾಗಿತ್ತು ಎಂದಿದ್ದಾರೆ.
‘ನಾನು ಈ ವಿಷಯವನ್ನು ನಿಯಮಿತವಾಗಿ ಅನುಸರಿಸುತ್ತಿದ್ದೇನೆ. ದೇಶದ ಕನಿಷ್ಠ 13 ವಿಮಾನ ನಿಲ್ದಾಣಗಳ ಹೆಸರನ್ನು ಮರುನಾಮಕರಣ ಮಾಡಲಾಗುವುದು ಮತ್ತು ಈ ವಿಮಾನ ನಿಲ್ದಾಣಗಳ ಬಗ್ಗೆ ಸಂಪುಟ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.