ಬೆಂಗಳೂರು: ತರಗತಿಯೊಳಗೆ ಹಿಜಾಬ್ ಧರಿಸುವುದನ್ನು ವಿರೋಧಿಸುವವರ ವಿರುದ್ಧ ಪ್ರಚೋದನಕಾಯಾಗಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಮುಕ್ರಂಖಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕಾಲೇಜುಗಳಲ್ಲಿ ನಿಗದಿತ ಸಮವಸ್ತ್ರದೊಂದಿಗೆ ಧಾರ್ಮಿಕ ಉಡುಪು ಅಥವಾ ಧ್ವಜಗಳನ್ನು ಧರಿಸುವುದನ್ನು ತಡೆಯುವ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರುವ ಖಾನ್, “ನಮ್ಮ ಮಕ್ಕಳನ್ನು ಹಿಜಾಬ್ ಧರಿಸದಂತೆ ತಡೆಯುವವರನ್ನು ತುಂಡು ತುಂಡಾಗಿ ಕತ್ತರಿಸಲಾಗುವುದು” ಎಂದಿದ್ದಾರೆ
ಇದೀಗ ಪ್ರಚೋದನಕಾರಿ ಭಾಷಣ, ಕೋಮು ಸೌಹಾರ್ದತೆ ಕದಡುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಗಂಭೀರ ಆರೋಪದ ಮೇಲೆ ಐಪಿಸಿ 153,294 ಅಡಿಯಲ್ಲಿ ಸೇಡಂ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮುಕ್ರಂಖಾನ್ ಹೇಳಿಕೆ ಖಂಡಿಸಿ ಹಿಂದೂಪರ ಸಂಘಟನೆಗಳು ಠಾಣೆಯ ಮುಂದೆ ಪ್ರತಿಭಟನೆ ನಡೆಸಿವೆ.
ಇನ್ನೊಂದೆಡೆ ಹೈಕೋರ್ಟ್ ಮಧ್ಯಂತರ ಆದೇಶವಿದ್ದರೂ ಕೆಲವು ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಬ್ ಧರಿಸಿ ಬಂದು ಹೈಡ್ರಾಮ ಸೃಷ್ಟಿಸುತ್ತಿದ್ದಾರೆ. ಹೀಗಾಗಿ ಕೆಲವೆಡೆ ಹಿಜಬ್ ವಿವಾದ ಮುಂದುವರೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.