ನವದೆಹಲಿ: ಈ ವರ್ಷ ರತ್ನಗಳು ಮತ್ತು ಆಭರಣ ವಲಯವು 40 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸುವ ನಿರೀಕ್ಷೆಯಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಈ ವಲಯವು ಕೋವಿಡ್ ಪೂರ್ವದ ಮಟ್ಟಕ್ಕಿಂತ 6.5 ಪ್ರತಿಶತದಷ್ಟು ಬೆಳವಣಿಗೆಯನ್ನು ದಾಖಲಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.
ಗೋಯಲ್ ಅವರು ರತ್ನ ಮತ್ತು ಆಭರಣ ರಫ್ತು ಉತ್ತೇಜನಾ ಮಂಡಳಿಯು ಆಯೋಜಿಸಿದ ಭಾರತ ಅಂತರರಾಷ್ಟ್ರೀಯ ಆಭರಣ ಪ್ರದರ್ಶನ ಸಿಗ್ನೇಚರ್ 2022 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಜೆಮ್ಸ್ ಮತ್ತು ಜ್ಯುವೆಲ್ಲರಿ ವಲಯವು ಭಾರತದ ಆರ್ಥಿಕತೆಯ ಬಲವಾದ ಆಧಾರಸ್ತಂಭವಾಗಿದೆ ಎಂದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ತನ್ನ ರತ್ನ ಮತ್ತು ಆಭರಣ ಕ್ಷೇತ್ರವನ್ನು ಸ್ವಾವಲಂಬಿಯನ್ನಾಗಿ ಮಾಡಲು ಬಯಸುತ್ತದೆ ಎಂದಿದ್ದಾರೆ.
ಜಾಗತಿಕ ರತ್ನಗಳು ಮತ್ತು ಆಭರಣ ವ್ಯಾಪಾರದಲ್ಲಿ ಭಾರತದ ಹೆಜ್ಜೆಗುರುತನ್ನು ಬೆಳೆಯಲು ಮತ್ತು ವಿಸ್ತರಿಸಲು 2022 ರ ಬಜೆಟ್ ಈ ವಲಯಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.