ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ ನಡೆಸಿದರು.
ಗೃಹ ಸಚಿವಾಲಯದ ಪ್ರಕಾರ, ಸಭೆಯ ಸಂದರ್ಭದಲ್ಲಿ ಅಮಿತ್ ಶಾ ಅವರು ಕಳೆದ ಕೆಲವು ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆಗಳನ್ನು ಕಡಿಮೆ ಮಾಡುವಲ್ಲಿ ಭದ್ರತಾ ಏಜೆನ್ಸಿಗಳ ಪ್ರಯತ್ನಗಳನ್ನು ಶ್ಲಾಘಿಸಿದರು. 2018ರಲ್ಲಿ ಭಯೋತ್ಪಾದನಾ ಘಟನೆಗಳ ಸಂಖ್ಯೆ 417 ರಿಂದ 2021 ರಲ್ಲಿ 229 ಕ್ಕೆ ಇಳಿದಿದೆ. 2018 ರಲ್ಲಿ ಹುತಾತ್ಮರಾದ ಭದ್ರತಾ ಪಡೆಗಳ ಸಂಖ್ಯೆ 91 ರಿಂದ 2021 ರಲ್ಲಿ 42 ಕ್ಕೆ ಇಳಿದಿದೆ.
ಭದ್ರತಾ ಗ್ರಿಡ್ ಅನ್ನು ಮತ್ತಷ್ಟು ಬಲಪಡಿಸಬೇಕು. ಶೂನ್ಯ ಗಡಿ ನುಸುಳುವಿಕೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಭಯೋತ್ಪಾದನೆಯನ್ನು ತೊಡೆದುಹಾಕಲು ಬಿಗಿ ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶನ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಸೇರಿದಂತೆ ಭಾರತ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.