ಬೆಂಗಳೂರು: ಶಾಲಾ-ಕಾಲೇಜುಗಳಿಗೆ ಯಾವುದೇ ಧಾರ್ಮಿಕ ಸೂಚಕಗಳು ಇರುವ ಬಟ್ಟೆಗಳನ್ನು ಧರಿಸಿ ಬರಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ ಕೆಲವರು ತಮ್ಮ ಹಠಮಾರಿ ಧೋರಣೆಯನ್ನು ಮುಂದುವರೆಸಿ ಹಿಜಾಬ್ ಹಾಕಿಕೊಂಡು ತರಗತಿಯೊಳಗೆ ಕುಳಿತುಕೊಳ್ಳಲು ಬಿಡುವಂತೆ ಗಲಾಟೆ ಮಾಡುತ್ತಿದ್ದಾರೆ. ಶಿಕ್ಷಕರು ಮನವಿ ಮಾಡಿದರೂ ಕಿಮ್ಮತ್ತು ಕೊಡದೆ ಕಾಲೇಜು ಆವರಣದೊಳಗೆ ಅಶಾಂತಿಯ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ.
ಇದೀಗ ನಿಷೇಧಾಜ್ಞೆ ಇದ್ದರೂ ಶಾಲಾ-ಕಾಲೇಜು ಆವರಣದಲ್ಲಿ ಗದ್ದಲ ಸೃಷ್ಟಿಸುವ, ಪ್ರತಿಭಟನೆ ಮಾಡುವ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮ ಜರಗಿಸಲಾಗುತ್ತಿದೆ.
ಫೆಬ್ರವರಿ 17 ರಂದು ತುಮಕೂರಿನ ಬಾಲಕಿಯರ ಎಂಪ್ರೆಸ್ ಸರ್ಕಾರಿ ಪಿಯು ಕಾಲೇಜಿನ ಹೊರಗೆ ಸೆಕ್ಷನ್ 144 ರ ಅಡಿಯಲ್ಲಿ ಹೊರಡಿಸಲಾದ ನಿಷೇಧಾಜ್ಞೆ ಉಲ್ಲಂಘಿಸಿ ಹಿಜಾಬ್ ಬೇಕೆಂದು ಪ್ರತಿಭಟನೆ ನಡೆಸಿದ ಕನಿಷ್ಠ 10 ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಸೆಕ್ಷನ್ 143, 145, 188 ಮತ್ತು 149 IPC ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
Karnataka: Police have registered an FIR against at least 10 girls for violating prohibitory orders issued under Section 144 of CrPC by staging a protest against the hijab rule outside Girls Empress Govt PU College in Tumkur on Feb 17, under Sections 143, 145, 188 and 149 of IPC
— ANI (@ANI) February 19, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.