ನವದೆಹಲಿ: ಭಾರತದ ವಿವಿಧ ನಗರಗಳು ಮತ್ತು ಪಟ್ಟಣಗಳಲ್ಲಿ ಕೃಷಿಯಲ್ಲಿ ಕೀಟನಾಶಕಗಳನ್ನು ಸಿಂಪಡಿಸಲು ರೈತರಿಗೆ ಸಹಾಯಕವಾಗುವ 100 ಕಿಸಾನ್ ಡ್ರೋನ್ಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, “21 ನೇ ಶತಮಾನದ ಆಧುನಿಕ ಕೃಷಿ ಸೌಲಭ್ಯಗಳ ದಿಕ್ಕಿನಲ್ಲಿ ಇದು ಹೊಸ ಅಧ್ಯಾಯವಾಗಿದೆ. ಈ ಆರಂಭವು ಡ್ರೋನ್ ಕ್ಷೇತ್ರದ ಅಭಿವೃದ್ಧಿಯಲ್ಲಿ ಒಂದು ಮೈಲಿಗಲ್ಲು ಎಂದು ಸಾಬೀತಾಗುತ್ತದೆ ಎಂದು ನನಗೆ ವಿಶ್ವಾಸವಿದೆ. ಅನಿಯಮಿತ ಸಾಧ್ಯತೆಗಳಿಗೆ ಆಕಾಶವೂ ಕೂಡ ಮುಕ್ತವಾಗಿರುತ್ತದೆ” ಎಂದಿದ್ದಾರೆ.
2022-23 ರ ಬಜೆಟ್ ಘೋಷಣೆಯ ಸಮಯದಲ್ಲಿ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಕೃಷಿ ಮತ್ತು ಕೃಷಿ ಕ್ಷೇತ್ರಕ್ಕೆ ಪ್ರಮುಖ ಉತ್ತೇಜನವಾಗಿ ಕೃಷಿ ಡ್ರೋನ್ ಆರಂಭಿಸುವುದಾಗಿ ತಿಳಿಸಿದ್ದರು. 2022-23ರ ಆರ್ಥಿಕ ವರ್ಷದಲ್ಲಿ ದೇಶದಾದ್ಯಂತ ರೈತರಿಗೆ ಡಿಜಿಟಲ್ ಮತ್ತು ಹೈಟೆಕ್ ಸೇವೆಗಳನ್ನು ತಲುಪಿಸಲು ಕೇಂದ್ರವು ಕಿಸಾನ್ ಡ್ರೋನ್ಗಳು, ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿ, ಸಾರ್ವಜನಿಕ-ಖಾಸಗಿ ಸಹಭಾಗಿತ್ವವನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದರು.
ತಂತ್ರಜ್ಞಾನದ ಬಳಕೆಗೆ ಒತ್ತು ನೀಡಿದ್ದ ಅವರು, ಬೆಳೆ ಮೌಲ್ಯಮಾಪನ, ಭೂ ದಾಖಲೆಗಳ ಡಿಜಿಟಲೀಕರಣ ಮತ್ತು ಕೀಟನಾಶಕಗಳು ಮತ್ತು ಪೋಷಕಾಂಶಗಳ ಸಿಂಪಡಣೆಗಾಗಿ ಕಿಸಾನ್ ಡ್ರೋನ್ಗಳನ್ನು ಉತ್ತೇಜಿಸಲಾಗುವುದು ಎಂದು ಹೇಳಿದ್ದರು.
Glad to have witnessed Kisan Drones in action at 100 places across the country. This is a commendable initiative by a vibrant start-up, @garuda_india.
Innovative technology will empower our farmers and make agriculture more profitable. pic.twitter.com/x5hTytderV
— Narendra Modi (@narendramodi) February 19, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.