ನವದೆಹಲಿ: ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಈ ತಿಂಗಳ ಕೊನೆಯಲ್ಲಿ ಭಾರತ ಮತ್ತು ಉಕ್ರೇನ್ ನಡುವೆ ಮೂರು ವಿಮಾನಗಳನ್ನು ನಿರ್ವಹಿಸುವುದಾಗಿ ಘೋಷಿಸಿದೆ. ಇದರಿಂದಾಗಿ ಉಕ್ರೇನ್ನಲ್ಲಿನ ಭಾರತೀಯರು ಭಾರತಕ್ಕೆ ವಾಪಾಸ್ ಆಗಲು ಅನುಕೂಲವಾಗಲಿದೆ. ಪ್ರಸ್ತುತ ಉಕ್ರೇನ್ ಮತ್ತು ರಷ್ಯಾ ನಡುವೆ ಉದ್ವಿಗ್ನ ಪರಿಸ್ಥಿತಿ ಇದ್ದು, ಯುದ್ಧ ಸಂಭವಿಸುವ ಸಾಧ್ಯತೆ ಇದೆ.
ಫೆ. 22, 24 ಮತ್ತು 26 ರಂದು ಭಾರತ ಮತ್ತು ಉಕ್ರೇನ್ ನಡುವೆ ಮೂರು ವಿಮಾನಗಳನ್ನು ನಿರ್ವಹಿಸಲಿದೆ ಎಂದು ಅದು ಹೇಳಿದ್ದು, ಈ ವಿಮಾನಗಳಲ್ಲಿ ಬುಕಿಂಗ್ಗಾಗಿ ಆಸನಗಳು ಲಭ್ಯವಿದ್ದು, ಏರ್ ಇಂಡಿಯಾ ಬುಕಿಂಗ್ ಕಚೇರಿಗಳು, ವೆಬ್ಸೈಟ್, ಕಾಲ್ ಸೆಂಟರ್ ಮತ್ತು ಅಧಿಕೃತ ಟ್ರಾವೆಲ್ ಏಜೆಂಟ್ಗಳ ಮೂಲಕ ಬುಕಿಂಗ್ ಮಾಡಬಹುದು.
ಉಕ್ರೇನ್ ಮತ್ತು ರಷ್ಯಾ ನಡುವೆ ಉದ್ವಿಗ್ನತೆ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಉಕ್ರೇನ್ನಲ್ಲಿರುವ ಭಾರತದ ರಾಯಭಾರ ಕಚೇರಿಯು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಭಯಭೀತರಾಗದಂತೆ ಮತ್ತು ಭಾರತಕ್ಕೆ ಪ್ರಯಾಣಿಸಲು ಲಭ್ಯವಿರುವ ಮತ್ತು ಅನುಕೂಲಕರ ವಿಮಾನಗಳನ್ನು ಕಾಯ್ದಿರಿಸುವಂತೆ ಸಲಹೆ ನೀಡಿದೆ. ಏರ್ ಇಂಡಿಯಾ ಮತ್ತು ಉಕ್ರೇನಿಯನ್ ಇಂಟರ್ನ್ಯಾಷನಲ್ ಏರ್ಲೈನ್ಸ್ ಸೇರಿದಂತೆ ಮುಂದಿನ ದಿನಗಳಲ್ಲಿ ಹೆಚ್ಚಿನ ವಿಮಾನಗಳನ್ನು ಹಾರಾಟ ನಡೆಸಲು ಯೋಜಿಸಲಾಗುತ್ತಿದೆ ಎಂದು ಅದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.