ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.
“ಶಿವಮೊಗ್ಗದ ಕೋಟೆ ಪ್ರಖಂಡ ಬಜರಂಗದಳದ ಸಹ ಸಂಯೋಜಕ ಹರ್ಷ ಅವರನ್ನು ಮತಾಂಧ, ದೇಶದ್ರೋಹಿ ಎಸ್ಡಿಪಿಐ ಮತ್ತು ಪಿಎಫ್ಐ ದುಷ್ಕರ್ಮಿಗಳು ನಿನ್ನೆ ರಾತ್ರಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ಸಂಗತಿ. ಕಳೆದ ಹಲವಾರು ವರ್ಷಗಳಿಂದ ವ್ಯವಸ್ಥಿತವಾಗಿ ಹಿಂದೂಗಳ ಮಾರಣ ಹೋಮ ಮಾಡುತ್ತಿದ್ದಾರೆ” ಎಂದು ವಿಶ್ವ ಹಿಂದೂ ಪರಿಷತ್ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸವರಾಜ್ ಆರೋಪಿಸಿದ್ದಾರೆ.
ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಡಿಜಿಪಿ ಎಸ್ ಮುರುಗನ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.