ನವದೆಹಲಿ: ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲ್ಪಟ್ಟಿರುವ ಸಿಖ್ಸ್ ಫಾರ್ ಜಸ್ಟಿಸ್ (SFJ) ನೊಂದಿಗೆ ನಿಕಟ ಸಂಪರ್ಕ ಹೊಂದಿರುವ ವಿದೇಶಿ ಮೂಲದ “ಪಂಜಾಬ್ ಪಾಲಿಟಿಕ್ಸ್ ಟಿವಿ” ಯ ಅಪ್ಲಿಕೇಶನ್ಗಳು, ವೆಬ್ಸೈಟ್ ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಂಗಳವಾರ ಆದೇಶಿಸಿದೆ.
ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ಅಡಿಯಲ್ಲಿ ಇವುಗಳ ಮೇಲೆ ನಿರ್ಬಂಧ ವಿಧಿಸಲಾಗುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
“ಪಂಜಾಬ್ ಪಾಲಿಟಿಕ್ಸ್ ಟಿವಿ”ಯು ಪಂಜಾಬ್ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರಲು ಆನ್ಲೈನ್ ಮಾಧ್ಯಮವನ್ನು ಬಳಸಲು ಪ್ರಯತ್ನಿಸುತ್ತಿದೆ ಎಂಬ ಗುಪ್ತಚರ ಮಾಹಿತಿಗಳನ್ನು ಅವಲಂಬಿಸಿ, ಸಚಿವಾಲಯವು ಫೆಬ್ರವರಿ 18 ರಂದು “ಪಂಜಾಬ್ ಪಾಲಿಟಿಕ್ಸ್ ಟಿವಿ” ಯ ಡಿಜಿಟಲ್ ಮಾಧ್ಯಮ ಸಂಪನ್ಮೂಲಗಳನ್ನು ನಿರ್ಬಂಧಿಸಲು ಐಟಿ ನಿಯಮಗಳ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿದೆ.
“ನಿರ್ಬಂಧಿಸಲಾದ ಆ್ಯಪ್, ವೆಬ್ಸೈಟ್ ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳ ವಿಷಯಗಳು ಕೋಮು ಸೌಹಾರ್ದತೆ ಮತ್ತು ಪ್ರತ್ಯೇಕತಾವಾದವನ್ನು ಪ್ರಚೋದಿಸುತ್ತದೆ ಮತ್ತು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ರಾಜ್ಯದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಹಾನಿಕಾರಕವೆಂದು ಕಂಡುಬಂದಿದೆ ” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
“ಭಾರತದ ಸರ್ಕಾರವು ಜಾಗರೂಕವಾಗಿದೆ ಮತ್ತು ಭಾರತದಲ್ಲಿನ ಒಟ್ಟಾರೆ ಮಾಹಿತಿ ಪರಿಸರವನ್ನು ಸುರಕ್ಷಿತಗೊಳಿಸಲು ಮತ್ತು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸುವ ಸಾಮರ್ಥ್ಯವನ್ನು ಹೊಂದಿರುವ ಯಾವುದೇ ಕ್ರಮಗಳನ್ನು ತಡೆಯಲು ಬದ್ಧವಾಗಿದೆ” ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.