ಬೆಂಗಳೂರು: ಶಿವಮೊಗ್ಗದಲ್ಲಿ 28 ವರ್ಷದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆಗೆ ಸಂಬಂಧಿಸಿದಂತೆ ಹನ್ನೆರಡು ಮಂದಿಯನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು ಆರು ಜನರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿಆರ್ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳು ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನೂ ಎರಡು ದಿನಗಳವರೆಗೆ ಜಾರಿಯಲ್ಲಿರುತ್ತವೆ. ಅಲ್ಲದೆ ಜಿಲ್ಲೆಯಲ್ಲಿ ಇನ್ನೆರಡು ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಭಾನುವಾರ ರಾತ್ರಿ ಭಜರಂಗದಳದ ಕಾರ್ಯಕರ್ತನ ಹತ್ಯೆಯಾದಾಗಿನಿಂದಲೂ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸೆಲ್ವಮಣಿ ಆರ್ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
”ಜಿಲ್ಲೆಯಲ್ಲಿ ಕರ್ಫ್ಯೂ ವಿಸ್ತರಿಸಲಾಗಿದೆ. ಬೆಳಗ್ಗೆ 6ರಿಂದ 9ರವರೆಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಸೆಕ್ಷನ್ 144 ಅನ್ನು ಇನ್ನೂ ಎರಡು ದಿನಗಳ ಕಾಲ ಶುಕ್ರವಾರ ಬೆಳಗಿನವರೆಗೆ ವಿಸ್ತರಿಸಲಾಗಿದೆ. ಈ ದಿನಗಳಲ್ಲಿ ಶಾಲೆಗಳು ಮುಚ್ಚಲ್ಪಡುತ್ತವೆ” ಎಂದು ಅವರು ಹೇಳಿದ್ದಾರೆ.
ಹತ್ಯೆಯ ನಂತರ ನಗರದಲ್ಲಿ 14 ವಿವಿಧ ಹಿಂಸಾಚಾರದ ಘಟನೆಗಳು ನಡೆದಿದ್ದು, ಮೂರು ಪ್ರಕರಣಗಳಲ್ಲಿ ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.