ವಾಷಿಂಗ್ಟನ್: ರಷ್ಯಾ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಸರಣಿ ನಿರ್ಬಂಧಗಳನ್ನು ಘೋಷಿಸಿದ್ದಾರೆ. ಉಕ್ರೇನ್ ವಿರುದ್ಧ ರಷ್ಯಾ ಆಕ್ರಮಣಕಾರಿ ಧೋರಣೆಯನ್ನು ತಾಳಿರುವುದು ಇದಕ್ಕೆ ಕಾರಣ.
ಪೂರ್ವ ಉಕ್ರೇನ್ನ ಎರಡು ಪ್ರದೇಶಗಳನ್ನು ಸ್ವತಂತ್ರ ಎಂದು ಘೋಷಿಸಲು ಮುಂದಾಗಿರುವ ರಷ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬೈಡನ್, ರಷ್ಯಾ ಆಕ್ರಮಣಕಾರಿ ಆಗಿ ವರ್ತಿಸುತ್ತಿದೆ. ಹೀಗಾಗಿ ಎದುರಾಗಿರುವ ಸವಾಲುಗಳ ಬಗ್ಗೆ ನಮ್ಮ ದೃಷ್ಟಿ ಸ್ಪಷ್ಟವಾಗಿದೆ ಎಂದಿದ್ದಾರೆ.
ಅಮೆರಿಕದ ಮಿತ್ರ ರಾಷ್ಟ್ರಗಳು ಮತ್ತು ಪಾಲುದಾರ ರಾಷ್ಟ್ರಗಳೊಂದಿಗೆ ನಿಕಟವಾಗಿ ಸಂಯೋಜಿಸಿ ನಂತರ ನಿರ್ಬಂಧ ಹೇರಲಾಗಿದೆ. ರಷ್ಯಾ ಒಂದು ವೇಳೆ ಆಕ್ರಮಣಕಾರಿ ಧೋರಣಿ ಹೆಚ್ಚಿಸಿದರೆ ನಿರ್ಬಂಧಗಳನ್ನು ಇನ್ನಷ್ಟು ಹೆಚ್ಚಿಸಲಾಗುವುದು ಎಂದು ಬೈಡನ್ ಎಚ್ಚರಿಕೆ ನೀಡಿದ್ದಾರೆ.
“ರಷ್ಯಾದ ಎರಡು ದೊಡ್ಡ ಹಣಕಾಸು ಸಂಸ್ಥೆಗಳಾದ ವಿಇಬಿ ಮತ್ತು ಅವರ ಮಿಲಿಟರಿ ಬ್ಯಾಂಕುಗಳ ಮೇಲೆ ಪೂರ್ಣ ನಿರ್ಬಂಧವನ್ನು ಜಾರಿಗೊಳಿಸುತ್ತೇವೆ. ರಷ್ಯಾದ ಸಾರ್ವಭೌಮ ಸಾಲದ ಮೇಲೂ ಸಮಗ್ರ ನಿರ್ಬಂಧಗಳನ್ನು ಹೇರುತ್ತಿದ್ದೇವೆ. ಅಂದರೆ ನಾವು ರಷ್ಯಾಕ್ಕೆ ಪಾಶ್ಚಿಮಾತ್ಯ ರಾಷ್ಟ್ರಗಳ ಹಣಕಾಸು ಸೌಲಭ್ಯವನ್ನು ಕಡಿತಗೊಳಿಸುತ್ತಿದ್ದೇವೆ. ಇನ್ನು ಮುಂದೆ ರಷ್ಯಾಕ್ಕೆ ಪಾಶ್ಚಿಮಾತ್ಯ ರಾಷ್ಟ್ರಗಳಿಂದ ಹಣಕಾಸು ನೆರವು ಸಿಗುವುದಿಲ್ಲ ಮತ್ತು ನಮ್ಮ ಮಾರುಕಟ್ಟೆಗಳಲ್ಲಿ ಅಥವಾ ಯುರೋಪಿಯನ್ ಮಾರುಕಟ್ಟೆಗಳಲ್ಲಿ ವ್ಯಾಪಾರ ಮಾಡಲು ಅದಕ್ಕೆ ಸಾಧ್ಯವಾಗುವುದಿಲ್ಲ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.