ನವದೆಹಲಿ: ಹಣಕಾಸು ವಂಚನೆ ಪ್ರಕರಣದಲ್ಲಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ ಇಂದು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ಭೂಗತ ಜಗತ್ತಿನ ಚಟುವಟಿಕೆಗಳಿಗೆ ಸಂಬಂಧಿಸಿದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು ಮಹಾರಾಷ್ಟ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರನ್ನು ವಿಚಾರಣೆಗೊಳಪಡಿಸಿತ್ತು. ಎನ್ಸಿಪಿ ನಾಯಕ ಇಡಿ ಕಚೇರಿಗೆ ಆಗಮಿಸಿ ವೇಳೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಸಂಸ್ಥೆಯು ಅವರನ್ನು ವಶಕ್ಕೆ ಪಡೆದು ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದೆ.
ನವಾಬ್ ಮಲಿಕ್ ಎನ್ಸಿಪಿಯ ರಾಷ್ಟ್ರೀಯ ವಕ್ತಾರರು ಮತ್ತು ಪಕ್ಷದ ಮುಂಬೈ ಘಟಕದ ಮುಖ್ಯಸ್ಥರೂ ಆಗಿದ್ದಾರೆ. ಭೂಗತ ಜಗತ್ತಿನ ಕಾರ್ಯಾಚರಣೆಗಳು, ಅಕ್ರಮ ಆಸ್ತಿ ವ್ಯವಹಾರಗಳು ಮತ್ತು ಹವಾಲಾ ವಹಿವಾಟುಗಳಿಗೆ ಸಂಬಂಧಿಸಿದಂತೆ ಫೆಬ್ರವರಿ 15 ರಂದು ಮುಂಬೈನಲ್ಲಿ ನಡೆಸಿದ ದಾಳಿಗಳ ನೋಂದಣಿ ಇಡಿ ನವಾಬ್ ಅವರನ್ನು ಬಂಧಿಸಿದೆ.
#WATCH | Mumbai: NCP leader and Maharashtra Minister Nawab Malik being brought out of Enforcement Directorate office, to be taken for medical examination.
He has been arrested by Enforcement Directorate in connection with Dawood Ibrahim money laundering case. pic.twitter.com/UMAVK5ZEVW
— ANI (@ANI) February 23, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.