ನವದೆಹಲಿ: ಪಿಎಂ-ಕಿಸಾನ್ ಯೋಜನೆ ಪ್ರಾರಂಭವಾಗಿ ಇಂದಿಗೆ ಮೂರು ವರ್ಷಗಳು ಪೂರೈಸಿದೆ. ಇದುವರೆಗೆ ಒಟ್ಟು 1.80 ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ರೈತರ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ
ಈ ಯೋಜನೆಯನ್ನು 2019 ರ ಫೆಬ್ರವರಿ 24 ರಂದು ದೇಶಾದ್ಯಂತ ಎಲ್ಲಾ ಸಣ್ಣ ಮತ್ತು ಮಧ್ಯಮ ರೈತರ ಕುಟುಂಬಗಳಿಗೆ ಆದಾಯದ ಬೆಂಬಲವನ್ನು ಒದಗಿಸಲು ಮತ್ತು ಅವರಿಗೆ ಕೃಷಿಗೆ ಸಂಬಂಧಿಸಿದ ವೆಚ್ಚಗಳನ್ನು ಮತ್ತು ಅಗತ್ಯಗಳನ್ನು ಪೂರೈಸಲು ನೆರವು ನೀಡುವ ಸಲುವಾಗಿ ಪ್ರಾರಂಭಿಸಲಾಯಿತು.
ಯೋಜನೆಯಡಿಯಲ್ಲಿ, ಅರ್ಹ ರೈತರಿಗೆ ವರ್ಷಕ್ಕೆ ಆರು ಸಾವಿರ ರೂಪಾಯಿಗಳನ್ನು ಎರಡು ಸಾವಿರ ರೂಪಾಯಿಗಳ ಮೂರು ಕಂತುಗಳಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಈ ಯೋಜನೆಯಡಿ ಆರಂಭದಲ್ಲಿ ಎರಡು ಹೆಕ್ಟೇರ್ಗಳವರೆಗೆ ಕೃಷಿಯೋಗ್ಯ ಭೂಮಿಯನ್ನು ಹೊಂದಿರುವ ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳಿಗೆ ಆದಾಯದ ಬೆಂಬಲವನ್ನು ನೀಡಲಾಗುತ್ತಿತ್ತು, ಆದರೆ ನಂತರ ಅದನ್ನು ರೈತರ ಭೂಹಿಡುವಳಿಗಳ ಗಾತ್ರವನ್ನು ಲೆಕ್ಕಿಸದೆ ಎಲ್ಲಾ ರೈತ ಕುಟುಂಬಗಳನ್ನು ಒಳಗೊಳ್ಳುವ ನಿಟ್ಟಿನಲ್ಲಿ ವಿಸ್ತರಿಸಲಾಯಿತು.
ಇಲ್ಲಿಯವರೆಗೆ, ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ 1.80 ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ರೈತ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.