ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ರಾತ್ರಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು, ಉಕ್ರೇನ್ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅಧ್ಯಕ್ಷ ಪುಟಿನ್ ಪ್ರಧಾನಿ ಮೋದಿಗೆ ವಿವರಿಸಿದರು ಎನ್ನಲಾಗಿದೆ.
ರಷ್ಯಾ ಮತ್ತು ನ್ಯಾಟೋ ಗುಂಪಿನ ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಾಮಾಣಿಕ ಸಂವಾದದ ಮೂಲಕ ಮಾತ್ರ ಪರಿಹರಿಸಬಹುದು ಎಂಬ ತಮ್ಮ ದೀರ್ಘಕಾಲದ ನಂಬಿಕೆಯನ್ನು ಈ ವೇಳೆ ಪ್ರಧಾನಿ ಪುನರುಚ್ಚರಿಸಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಪ್ರಧಾನಿ ಪುಟಿನ್ ಅವರಿಗೆ ಮನವಿ ಮಾಡಿದರು ಮತ್ತು ರಾಜತಾಂತ್ರಿಕ ಮಾತುಕತೆ ಮತ್ತು ಸಂವಾದದ ಹಾದಿಗೆ ಮರಳಲು ಎಲ್ಲಾ ಕಡೆಯಿಂದ ಸಂಘಟಿತ ಪ್ರಯತ್ನಗಳು ನಡೆಯಲಿ ಎಂದು ಕರೆ ನೀಡಿದರು.
ಪ್ರಧಾನಿ ಮೋದಿ ಅವರು ಉಕ್ರೇನ್ನಲ್ಲಿರುವ ಭಾರತೀಯ ನಾಗರಿಕರ, ವಿಶೇಷವಾಗಿ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಭಾರತ ಹೊಂದಿರುವ ಕಳವಳಗಳ ಬಗ್ಗೆ ರಷ್ಯಾದ ಅಧ್ಯಕ್ಷರಿಗೆ ತಿಳಿಸಿದ್ದಾರೆ. ಭಾರತೀಯರ ಸುರಕ್ಷತೆ ಮತ್ತು ಭಾರತಕ್ಕೆ ಮರಳಲು ಭಾರತವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಹೇಳಿದ್ದಾರೆ.
ತಮ್ಮ ಅಧಿಕಾರಿಗಳು ಮತ್ತು ರಾಜತಾಂತ್ರಿಕ ತಂಡಗಳು ಈ ವಿಷಯಗಳ ಬಗ್ಗೆ ನಿಯಮಿತ ಸಂಪರ್ಕಗಳನ್ನು ಮುಂದುವರಿಸುವುದಕ್ಕೆ ನಾಯಕರು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.