ನವದೆಹಲಿ: ರಷ್ಯಾದೊಂದಿಗಿನ ಭಾರತದ ಸಂಬಂಧವು ವಿಶಿಷ್ಟವಾಗಿದೆ. ಹೀಗಾಗಿ ಭಾರತದ ನಿರ್ಧಾರದ ಬಗ್ಗೆ ನಮಗೆ ಅಭ್ಯಂತರವಿಲ್ಲ ಎಂದು ಅಮೆರಿಕಾ ಹೇಳಿದೆ.
ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತ-ಅಮೆರಿಕದ ಸಂಬಂಧ ಹದಗೆಡಿಸುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯುಎಸ್ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್, ಯುಎಸ್ ಪ್ರಮುಖ ಆಸಕ್ತಿಗಳು ಮತ್ತು ಮೌಲ್ಯಗಳನ್ನು ಭಾರತದೊಂದಿಗೆ ಹಂಚಿಕೊಳ್ಳುತ್ತದೆ. ಆದರೆ ರಷ್ಯಾ-ಭಾರತದ ನಡುವೆ ವಿಶಿಷ್ಟ ಸಂಬಂಧವಿದೆ ಎಂದು ಹೇಳಿದರು.
“ನಾವು ಭಾರತದೊಂದಿಗೆ ಪ್ರಮುಖ ಹಿತಾಸಕ್ತಿಗಳನ್ನು ಹಂಚಿಕೊಳ್ಳುತ್ತೇವೆ. ನಾವು ಭಾರತದೊಂದಿಗೆ ಪ್ರಮುಖ ಮೌಲ್ಯಗಳನ್ನು ಹಂಚಿಕೊಳ್ಳುತ್ತೇವೆ. ಅಂತೆಯೇ ಭಾರತವು ರಷ್ಯಾದೊಂದಿಗೆ ಯಾವ ರೀತಿಯ ಸಂಬಂಧವನ್ನು ಹೊಂದಿದೆ ಎಂದು ನಮಗೆ ತಿಳಿದಿದೆ, ಅದು ನಾವು ರಷ್ಯಾದೊಂದಿಗೆ ಹೊಂದಿರುವ ಸಂಬಂಧಕ್ಕಿಂತ ಭಿನ್ನವಾಗಿದೆ. ದ್ಯಾಟ್ ಇಸ್ ಓಕೆ” ಎಂದಿದ್ದಾರೆ.
“ಭಾರತವು ರಷ್ಯಾದೊಂದಿಗೆ ವಿಶಿಷ್ಟ ಸಂಬಂಧವನ್ನು ಹೊಂದಿದೆ. ನಾವು ಖಂಡಿತವಾಗಿಯೂ ಮಾಸ್ಕೋದೊಂದಿಗೆ ಅಂತಹ ಸಂಬಂಧ ಹೊಂದಿಲ್ಲ. ಭಾರತ ಮತ್ತು ರಷ್ಯಾ ರಕ್ಷಣಾ ಮತ್ತು ಭದ್ರತಾ ಕ್ಷೇತ್ರ ಸೇರಿದಂತೆ ಹಲವಾರು ವಲಯದಲ್ಲಿ ಬಾಂಧ್ಯವ್ಯ ಹೊಂದಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.