ನವದೆಹಲಿ: ಖಾರ್ಕಿವ್ ಶೆಲ್ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿದ ನಂತರ ಉಕ್ರೇನ್ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಪ್ರಧಾನಿ ನಡೆಸಿದ ನಾಲ್ಕನೇ ಸಭೆ ಇದಾಗಿದೆ.
ಉಕ್ರೇನ್ನ ಖಾರ್ಕಿವ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಶೆಲ್ ದಾಳಿಗೆ ಭಾರತೀಯ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ.
ಕರ್ನಾಟಕದ ಹಾವೇರಿ ಮೂಲದ ಭಾರತೀಯ ವಿದ್ಯಾರ್ಥಿ ನವೀನ್ ಉಕ್ರೇನ್ನ ಖಾರ್ಕಿವ್ನಲ್ಲಿ ರಷ್ಯಾದ ಶೆಲ್ ದಾಳಿಗೆ ಸಾವನ್ನಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನವೀನ್ ಅವರ ಕುಟುಂಬಕ್ಕೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೀನ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಉಕ್ರೇನ್-ರಷ್ಯಾ ಯುದ್ಧಕ್ಕೆ ಭಾರತದ ಪ್ರತಿಕ್ರಿಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿವರಿಸಿದರು ಎಂದು ಮೂಲಗಳು ತಿಳಿಸಿವೆ.
ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಸಂಘಟಿಸಲು ಭಾರತದ ವಿಶೇಷ ರಾಯಭಾರಿಗಳಾಗಿ ನಾಲ್ವರು ಕೇಂದ್ರ ಸಚಿವರು ಉಕ್ರೇನ್ನ ನೆರೆಯ ರಾಷ್ಟ್ರಗಳಿಗೆ ತೆರಳಲಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.