ಲಕ್ನೋ: ಉತ್ತರ ಪ್ರದೇಶದಲ್ಲಿ ಆರನೇ ಹಂತದ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಈ ಹಂತದಲ್ಲಿ 10 ಜಿಲ್ಲೆಗಳ 57 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
ಮತದಾನ ನಡೆಯುತ್ತಿರುವ ಜಿಲ್ಲೆಗಳೆಂದರೆ ಬಲ್ಲಿಯಾ, ಬಲ್ರಾಮ್ಪುರ್, ಸಿದ್ಧಾರ್ಥ್ ನಗರ, ಬಸ್ತಿ, ಸಂತ ಕಬೀರ್ ನಗರ, ಅಂಬೇಡ್ಕರ್ ನಗರ, ಮಹಾರಾಜ್ಗಂಜ್, ಕುಶಿನಗರ, ಗೋರಖ್ಪುರ ಮತ್ತು ಡಿಯೋರಿಯಾ. ಈ ಹಂತದಲ್ಲಿ 66 ಮಹಿಳೆಯರು ಸೇರಿದಂತೆ ಒಟ್ಟು 676 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಅನ್ನು ಪ್ರತಿ ಮತಗಟ್ಟೆಯಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಜೊತೆಗೆ ಬಳಸಲಾಗುತ್ತಿದೆ.
ಕರೋನಾ ಸಾಂಕ್ರಾಮಿಕದ ದೃಷ್ಟಿಯಿಂದ, ಚುನಾವಣಾ ಆಯೋಗವು ಕೋವಿಡ್-ಸುರಕ್ಷಿತ ಚುನಾವಣೆಗಳತ್ತ ಗಮನ ಹರಿಸಿದೆ.
ಇದೇ ವೇಳೆ, ಉತ್ತರ ಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಬ್ಬ ಇಂದು ಆರನೇ ಹಂತಕ್ಕೆ ಕಾಲಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎಲ್ಲಾ ಮತದಾರರು ಈ ಉತ್ಸವದಲ್ಲಿ ಭಾಗವಹಿಸಿ ಮತ ಚಲಾಯಿಸುವಂತೆ ಮೋದಿ ಟ್ವೀಟ್ನಲ್ಲಿ ಕೋರಿದ್ದಾರೆ. ನಿಮ್ಮ ಮತಗಳು ಪ್ರಜಾಪ್ರಭುತ್ವದ ಶಕ್ತಿ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.