ನವದೆಹಲಿ: ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಭದ್ರತಾ ಪಡೆಗಳು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ ಎಂದು ರಷ್ಯಾ ನೀಡಿರುವ ಹೇಳಿಕೆಯನ್ನು ಭಾರತ ಅಲ್ಲಗೆಳೆದಿದೆ. ಅಂತಹ ಯಾವುದೇ ಘಟನೆಯ ಬಗ್ಗೆ ವರದಿ ಇಲ್ಲ ಎಂದಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಯುದ್ಧ ಪೀಡಿತ ದೇಶದಲ್ಲಿರುವ ಭಾರತೀಯ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದೆ.
“ಯಾವುದೇ ವಿದ್ಯಾರ್ಥಿಗೆ ಸಂಬಂಧಿಸಿದಂತೆ ಯಾವುದೇ ಒತ್ತೆಯಾಳು ಪರಿಸ್ಥಿತಿಯ ಯಾವುದೇ ವರದಿಗಳನ್ನು ನಾವು ಸ್ವೀಕರಿಸಿಲ್ಲ. ಖಾರ್ಕಿವ್ ಮತ್ತು ನೆರೆಯ ಪ್ರದೇಶಗಳಿಂದ ದೇಶದ ಪಶ್ಚಿಮ ಭಾಗಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯಲು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡುವಲ್ಲಿ ನಾವು ಉಕ್ರೇನಿಯನ್ ಅಧಿಕಾರಿಗಳ ಬೆಂಬಲವನ್ನು ಕೋರಿದ್ದೇವೆ” ಎಂದು ಹೇಳಿಕೆ ತಿಳಿಸಿದೆ.
“ನಾವು ರಷ್ಯಾ, ರೊಮೇನಿಯಾ, ಪೋಲೆಂಡ್, ಹಂಗೇರಿ, ಸ್ಲೋವಾಕಿಯಾ ಮತ್ತು ಮೊಲ್ಡೊವಾ ಸೇರಿದಂತೆ ಆ ಪ್ರದೇಶದ ದೇಶಗಳೊಂದಿಗೆ ಪರಿಣಾಮಕಾರಿಯಾಗಿ ಸಮನ್ವಯ ಸಾಧಿಸುತ್ತಿದ್ದೇವೆ” ಎಂದು ಹೇಳಿದೆ.
ಉಕ್ರೇನಿಯನ್ ಅಧಿಕಾರಿಗಳು ನೀಡಿದ ಸಹಾಯವನ್ನು ಸಚಿವಾಲಯ ಶ್ಲಾಘಿಸಿದೆ ಮತ್ತು ಭಾರತೀಯ ಪ್ರಜೆಗಳನ್ನು ಸ್ವೀಕರಿಸುವಲ್ಲಿ ಉಕ್ರೇನ್ನ ಪಾಶ್ಚಿಮಾತ್ಯ ನೆರೆಹೊರೆ ರಾಷ್ಟ್ರಗಳ ಸಹಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.