ಇಟಾನಗರ: 8ನೇ ಕ್ರೊಯೇಷಿಯಾ ಓಪನ್ ಇಂಟರ್ನ್ಯಾಶನಲ್ ಟೇಕ್ವಾಂಡೋ ಚಾಂಪಿಯನ್ಶಿಪ್ನಲ್ಲಿ ಅರುಣಾಚಲ ಪ್ರದೇಶದ ಮೇಲ್ ಸುಬಾನ್ಸಿರಿ ಜಿಲ್ಲೆಯ ರೂಪಾ ಬೇಯರ್ ಅವರು ಮಹಿಳಾ ಸೀನಿಯರ್ 1 ಪೂಮ್ಸೆ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶಕ್ಕೆ ಗೌರವ ತಂದಿದ್ದಾರೆ.
ಅವರು ವರ್ಲ್ಡ್ ಟೇಕ್ವಾಂಡೋ (WT) ನ G2 ಈವೆಂಟ್ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಪೂಮ್ಸೆ ವಿಭಾಗದಲ್ಲಿ ಭಾರತದ ಮತ್ತೊಬ್ಬ ಆಟಗಾರ ರಾಹುಲ್ ಜೈನ್ ಜೊತೆಗೂಡಿ ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ.
“ರೂಪಾ ಭಾರತದಲ್ಲಿ ಟೇಕ್ವಾಂಡೋಗೆ ಒಂದು ಹೊಸ ಜೀವ ತುಂಬಿದ್ದಾರೆ ಮತ್ತು ಮುಂಬರುವ ಏಷ್ಯನ್ಸ್ ಗೇಮ್ಸ್ ಮತ್ತು ವಿಶ್ವ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಸ್ಪಷ್ಟ ಸಾಮರ್ಥ್ಯವಿದೆ ಎಂದು ತೋರಿಸಿಕೊಟ್ಟಿದ್ದಾರೆ. ಕ್ರೊಯೇಷಿಯಾದಲ್ಲಿ ಆಕೆ ಮಾಡಿದ ಸಾಧನೆಗೆ ನಾವೆಲ್ಲರೂ ಹೆಮ್ಮೆ ಪಡುತ್ತೇವೆ ಮತ್ತು ನಮ್ಮ ಫೆಡರೇಶನ್ಗಳು, ಕ್ರೀಡಾ ಸಚಿವಾಲಯ ಮತ್ತು ಇತರರು ತಮ್ಮ ಬೆಂಬಲವನ್ನು ಮುಂದುವರಿಸಿದರೆ ಶೀಘ್ರದಲ್ಲೇ ಅವರು ಅಂತರರಾಷ್ಟ್ರೀಯ ಸರ್ಕ್ಯೂಟ್ನಲ್ಲಿ ಪ್ರಾಬಲ್ಯ ಸಾಧಿಸುತ್ತಾರೆ ಎಂಬ ಭರವಸೆ ನನಗಿದೆ ”ಎಂದು ಅವರ ತರಬೇತುದಾರ ಅಭಿಷೇಕ್ ದುಬೆ ಹೇಳಿದ್ದಾರೆ.
ಇದಕ್ಕೂ ಮುನ್ನ 2019ರಲ್ಲಿ ನೇಪಾಳದ ಕಠ್ಮಂಡುವಿನಲ್ಲಿ ನಡೆದ 13ನೇ ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ರೂಪಾ ಬೆಳ್ಳಿ ಪದಕ ಗೆದ್ದಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.