ಬೆಂಗಳೂರು: ಬಹು ನಿರೀಕ್ಷಿತ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ಕ್ಕೆ ದಿನಗಣನೆ ಆರಂಭವಾಗಿದ್ದು, ಬಹುತೇಕ ಏಪ್ರಿಲ್ 24 ರಿಂದ ಮೇ 3 ರವೆರೆಗೆ ನಡೆಯುವ ಸಾಧ್ಯತೆ ಇದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಕ್ರೀಡಾ ಇಲಾಖೆ ಅಧಿಕಾರಿಗಳು ಹಾಗೂ ಜೈನ್ ವಿವಿ ಕುಲಪತಿಗಳೊಂದಿಗೆ ಸಚಿವ ಡಾ.ನಾರಾಯಣಗೌಡ ಅವರು ಸಭೆ ನಡೆಸಿ, ಕ್ರೀಡಾ ಕೂಟ ಆಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿದರು.
ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಉದ್ಘಾಟನೆಗೆ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದ್ದು, ಬಹುತೇಕ ಅವರು ಬರುವುದು ನಿಚ್ಚಳವಾಗಿದೆ ಎಂದು ಸಚಿವರು ತಿಳಿಸಿದರು.
ಇದೇ ಮೊದಲ ಬಾರಿಗೆ 23 ಗೇಮ್ಗಳನ್ನು ಆಯೋಜಿಸುತ್ತಿದ್ದು, ರಾಷ್ಟ್ರಾದ್ಯಂತ ಸುಮಾರು 8000 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕರ್ನಾಟಕದ ಮಲ್ಲಕಂಬ, ಯೋಗ, ಕರಾಟೆ ಕ್ರೀಡೆಗಳನ್ನು ಇದೇ ಮೊದಲ ಬಾರಿಗೆ ಈ ಕ್ರೀಡಾ ಕೂಟದಲ್ಲಿ ಪರಿಚಯಿಸಲಾಗುತ್ತಿದೆ.
ಕ್ರೀಡಾ ಕೂಟದ ಲೋಗೋ, ಮಸ್ಕಟ್ಗೆ ಕೇಂದ್ರ ಕ್ರೀಡಾ ಮಂತ್ರಾಲಯವು ಅನುಮೋದನೆ ನೀಡಿದ್ದು, ಸದ್ಯದಲ್ಲಿಯೇ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಇದೇ ಮೊದಲ ಬಾರಿಗೆ ಅದ್ದೂರಿ ಕ್ರೀಡಾ ಕೂಟವನ್ನು ಆಯೋಜಿಸುವ ಅವಕಾಶ ಸಿಕ್ಕಿದ್ದು ಅತ್ಯುತ್ತಮವಾಗಿ ಕ್ರೀಡಾಕೂಟವನ್ನು ಸಂಘಟಿಸಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.