ವಾಷಿಂಗ್ಟನ್: ಈ ತಿಂಗಳಲ್ಲಿ ಅಮೆರಿಕ ಪ್ರವಾಸಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತೊಮ್ಮೆ ಅದ್ಧೂರಿ ಸ್ವಾಗತವನ್ನು ಕೋರಲು ಅಲ್ಲಿನ ಭಾರತೀಯ ಸಮುದಾಯ ಸಜ್ಜಾಗಿದೆ.
ಸೆ.27ರಂದು ಭಾರತೀಯ ಅಮೆರಿಕನ್ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಅವರ ಈ ಭಾಷಣವನ್ನು ಆಲಿಸಲು ಈಗಾಗಲೇ 45 ಸಾವಿರ ಮಂದಿ ಮಂದಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಕೇವಲ 18,500 ಮಂದಿಗೆ ಮಾತ್ರ ಅವಕಾಶ ದೊರೆಯಲಿದೆ. ಅಂತಿಮ ಪಟ್ಟಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಎಸ್ಎಪಿ ಅರೆನಾದ ಸಾನ್ ಜೋಸ್ನಲ್ಲಿ ಈ ಸಮಾರಂಭ ಏರ್ಪಡಲಿದೆ.
ವಾಹನ ಚಾಲಕರಿಂದ ಹಿಡಿದು ಕಂಪನಿಗಳ ಸಿಇಓಗಳೂ ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.
ಮೊರಾರ್ಜಿ ದೇಸಾಯಿಯವರ ಬಳಿಕ ಕ್ಯಾಲಿಫೋರ್ನಿಯಾಗೆ ಭೇಟಿ ಕೊಡಲಿರುವ ಮೊದಲ ಪ್ರಧಾನಿ ನರೇಂದ್ರ ಮೋದಿಯಾಗಿದ್ದಾರೆ. 1978ರಲ್ಲಿ ದೇಸಾಯಿ ಅಲ್ಲಿಗೆ ಭೇಟಿ ಕೊಟ್ಟಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.