ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಯಾವುದೇ ತೆರಿಗೆ ಹೆಚ್ಚಳವಿಲ್ಲದೆ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆಯಾಗಿದೆ.
ಆಯವ್ಯಯದ ಗಾತ್ರ 2,65,720 ಕೋಟಿ ರೂಪಾಯಿಗಳಾಗಿದೆ.
ಕೃಷಿ ಕ್ಷೇತ್ರಕ್ಕೆ 33,700 ಕೋಟಿ ರೂಪಾಯಿ ಘೋಷಣೆ ಮಾಡಿದ ಬಿಎಸ್ ಬಸವರಾಜ ಬೊಮ್ಮಾಯಿ ಅವರು, ರೈತ ಶಕ್ತಿ ಹೊಸ ಯೋಜನೆಯನ್ನು ಘೋಷಿಸಿದರು.
ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 68,479 ಕೋಟಿ ರೂ ಮೀಸಲಿಡಲಾಗಿದೆ. ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು 55,657 ಕೋಟಿ ರೂ ಮೀಸಲಿಡಲಾಗಿದೆ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ ಮೀಸಲಿಡಲಾಗಿದೆ. ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ 3,102 ಕೋಟಿ ರೂ ರೂಪಾಯಿ ಮೀಸಲಿಡಲಾಗಿದೆ. ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗೆ 56,710 ಕೋಟಿ ರೂ ಮೀಸಲಿಡಲಾಗಿದೆ. ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ಆಯವ್ಯಯದಲ್ಲಿ ಒದಗಿಸಿದ ಅನುದಾನ 43, 188 ಕೋಟಿ ರೂ ಆಗಿದೆ. ಮಕ್ಕಳ ಅಭ್ಯುದಯಕ್ಕೆ ಆಯವ್ಯಯದಲ್ಲಿ ಒದಗಿಸಿದ ಅನುದಾನ 40, 944 ಕೋಟಿ ರೂ ಆಗಿದೆ.
ಎಲ್ಲರಿಗೂ ಆರೋಗ್ಯ, ಎಲ್ಲೆಡೆ ಆರೋಗ್ಯ’ ಎಂಬ ಧ್ಯೇಯದೊಂದಿಗೆ ಆರೋಗ್ಯ ಕ್ಷೇತ್ರಕ್ಕೆ ಸಿಎಂ ಬೊಮ್ಮಾಯಿ ಅನೇಕ ಕೊಡುಗೆ ಘೋಷಿಸಿದ್ದಾರೆ. ಬೆಂಗಳೂರಿನ ಎಲ್ಲ ವಾರ್ಡ್ಗಳಲ್ಲಿ ಹಾಗೂ ಪ್ರಮುಖ ನಗರಗಳಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆಗಾಗಿ 438 ‘ನಮ್ಮ ಕ್ಲಿನಿಕ್’ಗಳ ಸ್ಥಾಪನೆ, 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ, ಬಡ-ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ಸೌಲಭ್ಯ, ಏಳು ತಾಲೂಕು ಆಸ್ಪತ್ರೆಗಳನ್ನು 100 ಹಾಸಿಗೆಗಳ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿ, ಕೆತುಮಕೂರಿನಲ್ಲಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ, ಬೆಳಗಾವಿಯಲ್ಲಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ, ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ ಘೋಷಣೆಯಾಗಿದೆ.
ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು ಯೋಜನೆ ಹಾಗೂ ಕಳಸಾ ಬಂಡೂರಿ ಯೋಜನೆಗಳಿಗೆ ತಲಾ 1 ಸಾವಿರ ಕೋಟಿ ರುಪಾಯಿ ಅನುದಾನ ಘೋಷಿಸಲಾಗಿದೆ.
ಇನ್ನುಳಿದಂತೆ ಕಾಳಿ ನದಿಯಿಂದ ಕುಡಿಯುವ ನೀರು ಪೂರೈಕೆ ಯೋಜನೆ ಅನುಷ್ಠಾನಕ್ಕೆ ತರಲಿದ್ದು ಇದರಿಂದ ಉತ್ತರ ಕರ್ನಾಟಕದ 5 ಜಿಲ್ಲೆಗಳಿಗೆ ನೀರು ಪೂರೈಕೆಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.