ಬೆಂಗಳೂರು: ಇಂದು ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ‘ಪುಣ್ಯಕೋಟಿ ದತ್ತು ಯೋಜನೆ’ ಪ್ರಾರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ.
ರಾಜ್ಯದ ಗೋಶಾಲೆಗಳಲ್ಲಿ ಇರುವ ಗೋವುಗಳನ್ನು ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ವಾರ್ಷಿಕ 11 ಸಾವಿರ ರೂಪಾಯಿಗೆ ದತ್ತು ಪಡೆದುಕೊಳ್ಳುವುದನ್ನು ಪ್ರೋತ್ಸಾಹಿಸುವ ಸಲುವಾಗಿ ಪುಣ್ಯಕೋಟಿ ಯೋಜನೆ ಪ್ರಾರಂಭಿಸುವುದಾಗಿ ಸಿಎಂ ಹೇಳಿದ್ದಾರೆ.
ಗೋವುಗಳ ರಕ್ಷಣೆಗೆ ಬಿಜೆಪಿ ಸರಕಾರ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಹೇಳಿದ ಅವರು, ಕಳೆದ ವರ್ಷ ಜಾರಿಗೊಳಿಸಲಾಗಿದ್ದ ಗೋಹತ್ಯಾ ನಿಷೇಧ ಅಧಿನಿಯಮ 2020ರ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಗೋಶಾಲೆಗಳ ಸಂಖ್ಯೆಯನ್ನು 31ರಿಂದ 100ಕ್ಕೆ ಹೆಚ್ಚಿಸಲಾಗುತ್ತದೆ. ಇದಕ್ಕಾಗಿ 50 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದಿದ್ದಾರೆ.
ರಾಜ್ಯದ ಗೋತಳಿಗಳ ಸಂರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು, ಗೋ ಸಂತತಿಯನ್ನು ವೃದ್ಧಿಸುವ ಸಲುವಾಗಿ ಕೆಎಂಎಸ್ ಮೂಲಕ 2000 ತಳಿಗಳನ್ನು ರೈತರಿಗೆ ಹಂಚಿಕೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.