ಇಂಪಾಲ: ಮಣಿಪುರದಲ್ಲಿ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಇಂದು ಬೆಳಗ್ಗೆ ಆರಂಭವಾಗಿದೆ. ಈ ಹಂತದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಮತದಾನವನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳು ಮತ್ತು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಬೆಳಗ್ಗೆ 7.00 ಗಂಟೆಯಿಂದ ಮತದಾನ ಆರಂಭಗೊಂಡಿದೆ ಮತ್ತು ಸಂಜೆ 4 ಗಂಟೆಯವರೆಗೆ ಮುಂದುವರೆಯಲಿದೆ.
ಮಣಿಪುರದಲ್ಲಿ ಎರಡನೇ ಹಂತದ ಅಸೆಂಬ್ಲಿ ಚುನಾವಣೆಗಳಲ್ಲಿ, ಹತ್ತು ಜಿಲ್ಲೆಗಳಲ್ಲಿ ಹರಡಿರುವ 22 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ, ಅವುಗಳಲ್ಲಿ ಹನ್ನೊಂದು ಸ್ಥಾನಗಳು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿದೆ. ಈ ಹಂತದಲ್ಲಿ 22 ಸ್ಥಾನಗಳಿಗೆ ಇಬ್ಬರು ಮಹಿಳೆಯರು ಸೇರಿದಂತೆ 92 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
4,10,020 ಪುರುಷರು, 4,28,679 ಮಹಿಳೆಯರು ಮತ್ತು 31 ತೃತೀಯಲಿಂಗಿ ಮತದಾರರು ಸೇರಿದಂತೆ ಒಟ್ಟು 8,38,730 ಮತದಾರರು ಈ ಹಂತಕ್ಕೆ ಮತ ಚಲಾಯಿಸಲು ಅರ್ಹರಾಗಿದ್ದಾರೆ.
ಇದಕ್ಕೂ ಮೊದಲು, ಮಣಿಪುರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಕಳೆದ ಸೋಮವಾರ ನಡೆದಿದ್ದು, 38 ವಿಧಾನಸಭಾ ಕ್ಷೇತ್ರಗಳಲ್ಲಿ ದಾಖಲೆಯ 88.63 ಶೇಕಡಾ ಮತದಾನವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.